

ಇಂದು ಐಪಿಎಲ್ನ 53 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 7 ವಿಕೆಟ್ಗಳ ಜಯ ಸಾಧಿಸಿತ್ತು. ಪಂಜಾಬ್ 10 ಪಂದ್ಯಗಳಲ್ಲಿ 5 ರಲ್ಲಿ ಗೆದ್ದು 10 ಅಂಕಗಳೊಂದಿಗೆ 7 ನೇ ಸ್ಥಾನದಲ್ಲಿದೆ. ಕೋಲ್ಕತ್ತಾ 8 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ.