IPL 2023: ದಿಗ್ಗಜರ ಸಮಾಗಮ: ಸಚಿನ್ ತೆಂಡೂಲ್ಕರ್​ ಭೇಟಿಯಾದ ವಿರಾಟ್ ಕೊಹ್ಲಿ

IPL 2023: ಮಂಗಳವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ನಡುವಣ ಪಂದ್ಯಕ್ಕೂ ಮುನ್ನ ಕ್ರಿಕೆಟ್ ದಿಗ್ಗಜರ ಸಮಾಗಮವಾಗಿದೆ. ಅದರಲ್ಲಿ ಒಬ್ಬರು ಕ್ರಿಕೆಟ್ ಗಾಡ್ ಆದರೆ, ಮತ್ತೊಬ್ಬರು ಕ್ರಿಕೆಟ್ ಕಿಂಗ್.ಹೌದು, ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಅಭ್ಯಾಸದ ವೇಳೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಕಿಂಗ್ ಕೊಹ್ಲಿ ಭೇಟಿಯಾಗಿದ್ದಾರೆ. ಈ ಅಪೂರ್ವ ಸಮಾಗಮದ ಫೋಟೋಗಳನ್ನು ಆರ್ಸಿಬಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.ವಿಶೇಷ ಎಂದರೆ ಈ ಇಬ್ಬರು ಭಾರತೀಯ ದಂತಕಥೆಗಳು ಒಟ್ಟು 59,679 ಅಂತರಾಷ್ಟ್ರೀಯ ರನ್ ಮತ್ತು 175 ಶತಕಗಳನ್ನು ಬಾರಿಸಿದ್ದಾರೆ. ಅದರಲ್ಲೂ ಸಚಿನ್ ತೆಂಡೂಲ್ಕರ್ ಬಳಿಕ ಅತ್ಯಧಿಕ ಅಂತಾರಾಷ್ಟ್ರೀಯ ಶತಕ ಸಿಡಿಸಿದ ದಾಖಲೆ ಕಿಂಗ್ ಕೊಹ್ಲಿಯ ಹೆಸರಿನಲ್ಲಿದೆ.ಇನ್ನು ಮಾಸ್ಟರ್ ಬ್ಲಾಸ್ಟರ್ ಅವರ ಹಲವು ದಾಖಲೆಯನ್ನು ಮುರಿಯುವ ಮೂಲಕ ವಿರಾಟ್ ಕೊಹ್ಲಿ ಅಬ್ಬರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಇದೀಗ ಸಚಿನ್ ಅವರ ನೂರು ಶತಕದ ದಾಖಲೆಯತ್ತ ದಾಪುಗಾಲಿಟ್ಟಿದ್ದಾರೆ.ವಿಶೇಷ ಎಂದರೆ ಈ ಹಿಂದೆ ಸಚಿನ್ ತೆಂಡೂಲ್ಕರ್ ಕೂಡ ತಮ್ಮ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿಯಬಲ್ಲರು ಎಂದು ಭವಿಷ್ಯ ನುಡಿದಿದ್ದರು. ಇದೀಗ ಕಿಂಗ್ ಕೊಹ್ಲಿ ಕೂಡ ಅದೇ ಹಾದಿಯಲ್ಲಿ ಸಾಗಿರುವುದು ವಿಶೇಷ.ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯವು ಮಂಗಳವಾರ ನಡೆಯಲಿದ್ದು, ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇರಲಿದೆ. ಹೀಗಾಗಿ ಉಭಯ ತಂಡಗಳಿಗೆ ಈ ಪಂದ್ಯವು ಮಹತ್ವದ್ದಾಗಿದೆ. ಅದರಂತೆ ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿಯ ಆರ್​ಸಿಬಿ ಗೆಲ್ಲಲಿದೆಯಾ ಅಥವಾ ಸಚಿನ್ ತೆಂಡೂಲ್ಕರ್ ಮಾರ್ಗದರ್ಶನದ ಮುಂಬೈ ಇಂಡಿಯನ್ಸ್ ಜಯಿಸಲಿದೆಯಾ ಕಾದು ನೋಡಬೇಕಿದೆ.

source https://tv9kannada.com/photo-gallery/cricket-photos/ipl-2023-virat-kohli-meets-sachin-tendulkar-kannada-news-zp-573451.html

Leave a Reply

Your email address will not be published. Required fields are marked *