ODI rankings: ಐಪಿಎಲ್ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಪಾಕಿಸ್ತಾನ..!

ಐಸಿಸಿ ವಾರ್ಷಿಕ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಈ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಎಂದಿನಂತೆ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ. ಆದರೆ 2 ಮತ್ತು 3 ನೇ ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದೆ.ಈ ಹಿಂದೆ 2ನೇ ಸ್ಥಾನದಲ್ಲಿದ್ದ ಭಾರತ ಇದೀಗ ತನ್ನ ಸ್ಥಾನವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ.ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ 5 ಏಕದಿನ ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡ ಪಾಕಿಸ್ತಾನ ಸರಣಿ ಗೆಲುವಿನ ಲಾಭವನ್ನು ನೂತನ ರ್ಯಾಂಕಿಂಗ್​ ಪಟ್ಟಿಯಲ್ಲಿ ಪಡೆದುಕೊಂಡಿದೆ.ಇನ್ನು ಐಪಿಎಲ್​​ನಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾ ಯಾವುದೇ ಏಕದಿನ ಸರಣಿಯನ್ನು ಆಡದ ಕಾರಣ 115 ರೇಟಿಂಗ್​​ನೊಂದಿಗೆ 2ನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.ಆದರೂ ಐಪಿಎಲ್ ಮುಗಿದ ಬಳಿಕ ಏಕದಿನ ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಕ್ರಿಕೆಟ್ ಆಡುವ ಎಲ್ಲಾ ದೇಶಗಳು ದ್ವಿಪಕ್ಷೀಯ ಸರಣಿಯಲ್ಲಿ ಬ್ಯುಸಿಯಾಗಲಿವೆ. ಹೀಗಾಗಿ ಏಕದಿನ ರ್ಯಾಂಕಿಂಗ್​ನಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ಹೆಚ್ಚಿವೆ.ಇನ್ನುಳಿದಂತೆ ಪಾಕ್ ವಿರುದ್ಧ ಏಕದಿನ ಸರಣಿ ಸೋತ ನ್ಯೂಜಿಲೆಂಡ್ 104 ರೇಟಿಂಗ್​ನೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.5ನೇ ಸ್ಥಾನದಲ್ಲಿರುವ ಇಂಗ್ಲೆಂಡ್ 101 ರೇಟಿಂಗ್ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಅಫ್ಘಾನಿಸ್ಥಾನ, ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ಕ್ರಮವಾಗಿ 6,7,8,9,10ನೇ ಸ್ಥಾನ ಪಡೆದುಕೊಂಡಿವೆ.

source https://tv9kannada.com/photo-gallery/cricket-photos/odi-rankings-india-lose-2nd-spot-to-pakistan-psr-576443.html

Views: 0

Leave a Reply

Your email address will not be published. Required fields are marked *