IPL 2023: RCB ಪಾಲಿಗೆ ಮುಂದಿನ ಪಂದ್ಯ ಯಾಕೆ ಅಷ್ಟೊಂದು ಮುಖ್ಯ ಗೊತ್ತಾ?

IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 14 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು. ಅದರಲ್ಲೂ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೇಲೇರಬಹುದು. ಅಲ್ಲದೆ ಸನ್​​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ ಹಂತಕ್ಕೇರುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.ಇಲ್ಲಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್​ನೊಂದಿಗೆ ಗೆಲ್ಲುವ ಮೂಲಕ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶ ಇರಲಿದೆ. ಒಂದು ಆರ್​ಆರ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್ ಆಸೆ ಬಹುತೇಕ ಕಮರಲಿದೆ.ಹೀಗಾಗಿ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಲೇಬೇಕು. ಅಲ್ಲದೆ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕು.

source https://tv9kannada.com/photo-gallery/cricket-photos/ipl-2023-rr-vs-rcb-rcb-next-match-kannada-news-zp-575967.html

Views: 0

Leave a Reply

Your email address will not be published. Required fields are marked *