
ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಪಂದ್ಯದಲ್ಲಿ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಚೆನ್ನೈ ತಂಡವು ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಬಯಸುತ್ತದೆ. ಮತ್ತೊಂದೆಡೆ, ಕೋಲ್ಕತ್ತಾಗೆ ಪ್ಲೇಆಫ್ಗೆ ಹೋಗುವುದು ತುಂಬಾ ಕಷ್ಟವಾದರೂ ಈ ತಂಡದ ಗೆಲುವು ಇತರ ತಂಡಗಳಿಗೆ ಸಂಕಷ್ಟ ತಂದೊಡ್ಡಲಿದೆ.