KL Rahul: ಕೆಎಲ್ ರಾಹುಲ್ ಫೋಟೋ ವೈರಲ್: ಕಂಬ್ಯಾಕ್ ಯಾವಾಗ?

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು. ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

source https://tv9kannada.com/photo-gallery/cricket-photos/kl-rahul-shares-photo-after-latest-thigh-surgery-in-london-kannada-news-zp-578525.html

Views: 0

Leave a Reply

Your email address will not be published. Required fields are marked *