Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಶುಭ್​ಮನ್ ಗಿಲ್
Sports

IPL 2023: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಶುಭ್​ಮನ್ ಗಿಲ್

May 16, 2023
samagrasuddi

IPL 2023: ಐಪಿಎಲ್​ನ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕೂಡ ಮುರಿದಿದ್ದಾರೆ.ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ ದಾಖಲೆಯಾಗಿದೆ.ಅಂದರೆ ಐಪಿಎಲ್​ನಲ್ಲಿ ಸಿಕ್ಸ್​ ಬಾರಿಸದೇ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2010 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಚಿನ್ ತೆಂಡೂಲ್ಕರ್ ಕೇವಲ 23 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ವೇಳೆ ಅವರು ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ.ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ಸಿಕ್ಸ್ ಸಿಡಿಸದೇ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇದರೊಂದಿಗೆ ಕಳೆದ 1 ದಶಕಗಳಿಂದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಗಿಲ್ ಪಾಲಾಗಿದೆ.ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಲ್ಲದೆ ಅಂತಿಮವಾಗಿ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್​ನೊಂದಿಗೆ 101 ರನ್​ ಬಾರಿಸಿ ಮಿಂಚಿದ್ದರು. ಇದರೊಂದಿಗೆ ಗುಜರಾತ್ ಟೈಟಾನ್ಸ್ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾದರು.

source https://tv9kannada.com/photo-gallery/cricket-photos/ipl-2023-shubhman-gill-breaks-sachin-tendulkar-record-kannada-news-zp-580161.html

Tags: GT, IPL, Ipl2023, MI, Sachin Tendulkar, samagrasuddi, Shubham Gill, T-20, TATA IPL 2023, ಸಮಗ್ರ ಸುದ್ದಿ

Post navigation

IPL 2023: LSG vs MI ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು? ಇಲ್ಲಿದೆ ಮಾಹಿತಿ
ದಲಿತರ ಪರವಾಗಿದ್ದೇವೆಂದು ಬೊಬ್ಬೆ ಹೊಡೆಯುವುದಲ್ಲ : ದಲಿತರು ಮುಖ್ಯಮಂತ್ರಿಯಾಗುವುದು ಯಾವಾಗ ?   ಡಾ.ಬಿ.ಆರ್.ಅಂಬೇಡ್ಕರ್ ಆಶಯ ಈಡೇರುವುದು ಯಾವಾಗ ?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress