IPL 2023: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ RCB: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್

IPL 2023 RCB Playing XI vs SRH: ಐಪಿಎಲ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ.
ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಅತ್ತ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್​ಗೆ ಈ ಪಂದ್ಯ ಔಪಚಾರಿಕ. ಇದಾಗ್ಯೂ ತವರು ಮೈದಾನದಲ್ಲಿ ಗೆಲ್ಲುವ ಮೂಲಕ ಅಭಿಮಾನಿಗಳಿಗೆ ಮನಗೆಲ್ಲುವ ಇರಾದೆಯಲ್ಲಿದೆ ಎಸ್​ಆರ್​ಹೆಚ್.ಇನ್ನು ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 112 ರನ್​ಗಳ ಭರ್ಜರಿ ಜಯ ಸಾಧಿಸಿರುವ ಕಾರಣ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.1- ಫಾಫ್ ಡುಪ್ಲೆಸಿಸ್ (ನಾಯಕ)2- ವಿರಾಟ್ ಕೊಹ್ಲಿ3- ಗ್ಲೆನ್ ಮ್ಯಾಕ್ಸ್​ವೆಲ್4- ಮಹಿಪಾಲ್ ಲೊಮ್ರೋರ್5- ದಿನೇಶ್ ಕಾರ್ತಿಕ್ 6- ಅನೂಜ್ ರಾವತ್ (ವಿಕೆಟ್ ಕೀಪರ್)7- ಮೈಕೆಲ್ ಬ್ರೇಸ್​ವೆಲ್
8- ಕರ್ಣ್ ಶರ್ಮಾ9- ಹರ್ಷಲ್ ಪಟೇಲ್10- ಮೊಹಮ್ಮದ್ ಸಿರಾಜ್11- ವೇಯ್ನ್ ಪಾರ್ನೆಲ್
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-playing-xi-vs-srh-kannada-news-zp-581049.html

Leave a Reply

Your email address will not be published. Required fields are marked *