
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ.ಡಿ.27: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಾಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2022-23 ಉದ್ಘಾಟನಾ ಸಮಾರಂಭವನ್ನು ಇದೇ ಡಿಸೆಂಬರ್ 29ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸುವರು. ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ, ಹೊಳಲ್ಕೆರೆ ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್, ಟಿ.ರಘುಮೂರ್ತಿ, ಪೂರ್ಣಿಮ ಕೆ.ಶ್ರೀನಿವಾಸ್, ವಿಧಾನ ಪರಿಷತ್ ಶಾಸಕರಾದ ಕೆ.ಎಸ್.ನವೀನ್, ಚಿದಾನಂದ ಎಂ.ಗೌಡ, ನಗರಸಭೆ ಅಧ್ಯಕ್ಷ ಬಿ.ತಿಪ್ಪಮ್ಮ ವೆಂಕಟೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್ ಭಾಗವಹಿಸುವರು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ತಿಳಿಸಿದ್ದಾರೆ.
The post ಡಿಸೆಂಬರ್ 29ರಂದು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ : ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/Y7eVvu1
via IFTTT