Skip to content
  • Sunday, March 29, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಐಪಿಎಲ್​ ಅಭಿಯಾನ ಅಂತ್ಯ: 6 ತಂಡಗಳ ಗ್ರೂಪ್​ ಫೋಟೋ ಇಲ್ಲಿದೆ
Sports

IPL 2023: ಐಪಿಎಲ್​ ಅಭಿಯಾನ ಅಂತ್ಯ: 6 ತಂಡಗಳ ಗ್ರೂಪ್​ ಫೋಟೋ ಇಲ್ಲಿದೆ

May 23, 2023
samagrasuddi

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ 6 ತಂಡಗಳು ಹೊರಬಿದ್ದರೆ, 4 ತಂಡಗಳು ಪ್ಲೇಆಫ್ಸ್​ ಪ್ರವೇಶಿಸಿದೆ. ಅದರಂತೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ಸ್​ ಆಡುತ್ತಿದೆ.ಮತ್ತೊಂದೆಡೆ ಪ್ರಶಸ್ತಿ ಗೆಲ್ಲುವ ಕನಸಿದೊಂದಿಗೆ ಟೂರ್ನಿ ಆರಂಭಿಸಿದ 6 ತಂಡಗಳ ಆಟಗಾರರು ಗ್ರೂಪ್​ ಫೋಟೋದೊಂದಿಗೆ ಐಪಿಎಲ್​ ಸೀಸನ್ 16 ಕ್ಕೆ ಗುಡ್ ಬೈ ಹೇಳಿದ್ದಾರೆ. ಈ ತಂಡಗಳ ಫೋಟೋಸ್ ಇಲ್ಲಿದೆ...ಸನ್​ರೈಸರ್ಸ್ ಹೈದರಾಬಾದ್: ಈ ಬಾರಿಯ ಐಪಿಎಲ್​ನಲ್ಲಿ ಐಡೆನ್ ಮಾರ್ಕ್ರಾಮ್ ನೇತೃತ್ವದ ಎಸ್​ಆರ್​ಹೆಚ್ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಎಸ್​ಆರ್​ಹೆಚ್ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ ಮುನ್ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನ ಕೂಡ ಉತ್ತಮವಾಗಿರಲಿಲ್ಲ. 14 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನ ಅಲಂಕರಿಸುವ ಮೂಲಕ ಅಭಿಯಾನ ಅಂತ್ಯಗೊಳಿಸಿದೆ.ಪಂಜಾಬ್ ಕಿಂಗ್ಸ್: ಶಿಖರ್ ಧವನ್ ಸಾರಥ್ಯದಲ್ಲಿ ಕಣಕ್ಕಿಳಿದ ಪಂಜಾಬ್ ಕಿಂಗ್ಸ್ ಈ ಬಾರಿ ಗೆದ್ದಿದ್ದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಲ್ಲದೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದೊಂದಿಗೆ ಐಪಿಎಲ್​ನ 16ನೇ ಆವೃತ್ತಿಗೆ ವಿದಾಯ ಹೇಳಿದೆ.ಕೊಲ್ಕತ್ತಾ ನೈಟ್ ರೈಡರ್ಸ್: ಈ ಬಾರಿ ನಿತೀಶ್ ರಾಣಾ ನಾಯಕತ್ವದಲ್ಲಿ ಕಣಕ್ಕಿಳಿದ ಕೆಕೆಆರ್ ತಂಡವು ಗೆದ್ದಿದ್ದು ಕೇವಲ 6 ಮ್ಯಾಚ್​ಗಳಲ್ಲಿ ಮಾತ್ರ. ಅದರಂತೆ ಪಾಯಿಂಟ್ಸ್​ ಟೇಬಲ್​​ನಲ್ಲಿ 7ನೇ ಸ್ಥಾನ ಅಲಂಕರಿಸಿ ಐಪಿಎಲ್ ಅಭಿಯಾನ ಮುಗಿಸಿದೆ.ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಅಲ್ಲದೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದೊಂದಿಗೆ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದೆ.ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ತಂಡವು 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಕೂಡ ಕೊನೆಗೊಂಡಿತು.

source https://tv9kannada.com/photo-gallery/cricket-photos/ipl-2023-playoffs-ipl-2023-6-teams-group-photos-kannada-news-zp-585514.html

Tags: Cricket, IPL, IPL 2023, samagrasuddi, Sports, T-20, TATA IPL 2023, ಸಮಗ್ರ ಸುದ್ದಿ

Post navigation

ಒಂದು ಲಕ್ಷ ಮೌಲ್ಯದ ಫೋನ್ ಅನ್ನು ಕೇವಲ 22 ಸಾವಿರ ರೂ.ಗೆ ಖರೀದಿಸಿ! Samsung ಮೊಬೈಲ್ ಮೇಲೆ ಭಾರೀ ಡಿಸ್ಕೌಂಟ್
IPL 2023: ಫೈನಲ್​ಗೆ ಎಂಟ್ರಿ ಕೊಟ್ಟ ಚೆನ್ನೈ ಸೂಪರ್ ಕಿಂಗ್ಸ್​

Leave a Reply Cancel reply

Your email address will not be published. Required fields are marked *

CITIES

Cities

ಏ. 1ರಂದು ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ: ಸಿದ್ದಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ ಕಾರ್ಯಕ್ರಮ ಕಡಿತ!

March 29, 2026
samagrasuddi

ತುಮಕೂರು: ತ್ರಿವಿಧ ದಾಸೋಹಿ, ‘ನಡೆದಾಡುವ ದೇವರು’ ಎಂದೇ ಭಕ್ತರ ಮನದಲ್ಲಿ ನೆಲೆಸಿರುವ ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಅತ್ಯಂತ ಭಕ್ತಿ-ಭಾವದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು…

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi
Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 12 | ದಿನ 84

March 29, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 11 | ದಿನ 83

March 28, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82

March 27, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
  • Financial tasks: ಮಾರ್ಚ್ 31 ಡೆಡ್‌ಲೈನ್; ಹಣಕಾಸು ವರ್ಷಾಂತ್ಯದೊಳಗೆ ನೀವು ಪೂರ್ಣಗೊಳಿಸಲೇಬೇಕಾದ 7 ಪ್ರಮುಖ ಕೆಲಸಗಳಿವು!
  • ಏ. 1ರಂದು ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ: ಸಿದ್ದಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ ಕಾರ್ಯಕ್ರಮ ಕಡಿತ!
  • IDBI Recruitment : ಐಡಿಬಿಐ ಬ್ಯಾಂಕ್‌ನಲ್ಲಿ ಐಟಿ, ಭದ್ರತೆ, ಆಡಿಟ್ ವಿಭಾಗಗಳಲ್ಲಿ ಉದ್ಯೋಗ: ಏಪ್ರಿಲ್ 8 ರೊಳಗೆ ಅರ್ಜಿ ಸಲ್ಲಿಸಿ.
  • IPL 19: ಚಿನ್ನಸ್ವಾಮಿ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಅಬ್ಬರ, ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್‌ಗೆ ಸೋಲು.
  • Excessive sweat:ನೀವು ಅತಿಯಾಗಿ ಬೆವರುತ್ತೀರಾ? ಕಾರಣಗಳು, ಲಕ್ಷಣಗಳು ಮತ್ತು ಚಿಕಿತ್ಸೆಗಳ ಸಮಗ್ರ ಮಾಹಿತಿ.
Copyright © 2026
CONTACT US
Theme by: Theme Horse
Proudly Powered by: WordPress