CSK vs GT IPL 2023 Final Live Streaming: ಚಾಂಪಿಯನ್ ಪಟ್ಟಕ್ಕಾಗಿ ಕಾದಟ; ಐಪಿಎಲ್​ನ ಕೊನೆಯ ಪಂದ್ಯ ಎಷ್ಟು ಗಂಟೆಗೆ ಆರಂಭ?

CSK vs GT IPL 2023 Final Live Streaming: ಚಾಂಪಿಯನ್ ಪಟ್ಟಕ್ಕಾಗಿ ಕಾದಟ; ಐಪಿಎಲ್​ನ ಕೊನೆಯ ಪಂದ್ಯ ಎಷ್ಟು ಗಂಟೆಗೆ ಆರಂಭ?

16 ನೇ ಆವೃತ್ತಿಯ ಐಪಿಎಲ್​ನ ಕೊನೆಯ ಪಂದ್ಯ ನಾಳೆ ನಡೆಯಲಿದೆ. ನಾಲ್ಕು ಬಾರಿ ಐಪಿಎಲ್ ಚಾಂಪಿಯನ್ ಮುಂದೆ ಕಳೆದ ಬಾರಿಯ ಚಾಂಪಿಯನ್ ತಂಡ ಎದುರಾಗಿದೆ. ನಾಳೆ ಅಹಮದಾಬಾದ್‌ನಲ್ಲಿ 16 ನೇ ಐಪಿಎಲ್(IPL 2023) ಫೈನಲ್ ನಡೆಯಲ್ಲಿದ್ದು, ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ (Chennai Super Kings vs Gujarat Titans) ಮುಖಾಮುಖಿಯಾಗಲಿವೆ. ಈ ಬಾರಿಯ ಐಪಿಎಲ್‌ನ ಆರಂಭಿಕ ಪಂದ್ಯ ಅಹಮದಾಬಾದ್‌ನಲ್ಲಿ (Narendra Modi Stadium in Ahmedabad) ನಡೆದಿತ್ತು. ಇದೀಗ ಫೈನಲ್ ಕೂಡ ಅಲ್ಲಿಯೇ ನಡೆಯಲಿದೆ. ವಿಚಿತ್ರವೆಂದರೆ, ಆರಂಭಿಕ ಪಂದ್ಯದಲ್ಲಿ ಮುಖಾಮುಕಿಯಾಗಿದ್ದ ಅದೇ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಇನ್ನು ಈ ಉಭಯ ತಂಡಗಳ ಮುಖಾಮುಖಿ ವರದಿ ನೋಡುವುದಾದರೆ, ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 4 ಬಾರಿ ಮುಖಾಮುಖಿಯಾಗಿವೆ. ಕಳೆದ ಸೀಸನ್​ನ 2 ಪಂದ್ಯಗಳಲ್ಲಿ ಗುಜರಾತ್ ವಿರುದ್ಧ ಚೆನ್ನೈ ಸೋತಿತ್ತು. ಈ ಬಾರಿಯೂ ಗುಜರಾತ್ ಸೀಸನ್​ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ತಂಡವನ್ನು ಸೋಲಿಸಿತ್ತು. ಆ ಬಳಿಕ ಧೋನಿ ಸಾರಥ್ಯದ ಚೆನ್ನೈ ಮೊದಲ ಕ್ವಾಲಿಫೈಯರ್‌ನಲ್ಲಿ ಆ ಸೋಲಿಗೆ ಸೇಡು ತೀರಿಸಿಕೊಂಡಿತ್ತು. ಹೀಗಾಗಿ ನಾಲ್ಕು ಬಾರಿಯ ಈ ಮುಖಾಮುಖಿಯಲ್ಲಿ ಗುಜರಾತ್ 3-1 ರಿಂದ ಮುನ್ನಡೆ ಸಾಧಿಸಿದೆ.

IPL 2023: ಕ್ವಾಲಿಫೈಯರ್ 1 ಗೆದ್ದ ತಂಡವೇ ಚಾಂಪಿಯನ್! ಇದು ಅಂಕಿ-ಅಂಶ ನುಡಿದ ಭವಿಷ್ಯ

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯ ನಾಳೆ (ಮೇ 28) ಭಾನುವಾರ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯ ಯಾವಾಗ ಆರಂಭವಾಗುತ್ತದೆ?

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ 7 ಗಂಟೆಗೆ ಟಾಸ್ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/csk-vs-gt-ipl-2023-final-live-streaming-when-and-where-to-watch-chennai-super-kings-vs-gujarat-titans-final-cricket-match-today-in-kannada-psr-588446.html

Leave a Reply

Your email address will not be published. Required fields are marked *