IPL 2023 Final: ಈ ಸಲ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ ಫಾಫ್ ಡುಪ್ಲೆಸಿಸ್

IPL 2023 Final CSK vs GT: ಐಪಿಎಲ್​ ಫೈನಲ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್​​ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.ಉಭಯ ತಂಡಗಳು ಇದುವರೆಗೆ ಕೇವಲ 4 ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಇದರಲ್ಲಿ 3 ಬಾರಿ ಗುಜರಾತ್ ಟೈಟಾನ್ಸ್ ತಂಡವೇ ಗೆದ್ದಿದೆ. ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಣಿಸಿತ್ತು. ಹೀಗಾಗಿಯೇ ಫೈನಲ್ ಫೈಟ್​ನಲ್ಲಿ ಗೆಲ್ಲೋರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.ಇತ್ತ ಈ ಕುತೂಹಲವನ್ನು ತಣಿಸುವಂತೆ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಭವಿಷ್ಯ ನುಡಿದಿದ್ದಾರೆ. ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿದ ಡುಪ್ಲೆಸಿಸ್ ಈ ಬಾರಿ ಫೈನಲ್​ ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗಲಿದೆ.ಅದರಲ್ಲೂ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವುದು ಸುಲಭವಲ್ಲ. ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆಗೆ ಸೋಲುಣಿಸಿರುವ ಸಿಎಸ್​ಕೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದು ಡುಪ್ಲೆಸಿಸ್ ತಿಳಿಸಿದ್ದಾರೆ.ಏಕೆಂದರೆ ಮಹೇಂದ್ರ ಸಿಂಗ್ ಧೋನಿ ಅವರ ಚಾಣಾಕ್ಷತೆ ಫೈನಲ್​ ಪಂದ್ಯದಲ್ಲಿ ವರ್ಕ್ ಆಗಲಿದೆ. ಹೀಗಾಗಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಕಪ್ ಗೆಲ್ಲಲಿದೆ ಎಂದು ಫಾಫ್ ಡುಪ್ಲೆಸಿಸ್ ತಿಳಿಸಿದ್ದಾರೆ.ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

source https://tv9kannada.com/photo-gallery/cricket-photos/ipl-2023-final-faf-du-plessis-predictions-on-ipl-2023-final-winner-kannada-news-zp-588917.html

Views: 0

Leave a Reply

Your email address will not be published. Required fields are marked *