IPL 2023 Final: ಐಪಿಎಲ್ ಫೈನಲ್ ಫಿಕ್ಸ್? CSK ರನ್ನರ್ ಅಪ್..?

IPL 2023 Final CSK vs GT: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಫೈನಲ್ ಪಂದ್ಯ ಫಿಕ್ಸ್​​ ಆಗಿದೆಯಾ? ಇಂತಹದೊಂದು ಅನುಮಾನಕ್ಕೆ ಕಾರಣವಾಗಿದ್ದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಬರಹ​.ಹೌದು, ಭಾನುವಾರ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಆದರೆ ಇದರ ನಡುವೆ ಬಿಗ್ ಸ್ಕ್ರೀನ್​ನಲ್ಲಿ ನೀಡಲಾಗುತ್ತಿದ್ದ ಅಪ್​ಡೇಟ್​ಗಳ ವೇಳೆ ಸಿಎಸ್​ಕೆ ತಂಡವು ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿದೆ.ಇತ್ತ ಟಾಸ್ ಪ್ರಕ್ರಿಯೆಯೇ ನಡೆದಿಲ್ಲ. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
ಇದರ ಬೆನ್ನಲ್ಲೇ ಐಪಿಎಲ್​ ಫೈನಲ್ ಪಂದ್ಯವು ಈಗಾಗಲೇ ಫಿಕ್ಸ್​ ಆಗಿದೆಯಾ ಎಂಬ ಅನುಮಾನಗಳು ಮೂಡಿವೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ.ಒಟ್ಟಿನಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಫೋಟೋ ಇದೀಗ ಅನುಮಾನಕ್ಕೆ ಕಾರಣವಾಗಿದ್ದು, ಇದಾಗ್ಯೂ ಸೋಮವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

source https://tv9kannada.com/photo-gallery/cricket-photos/ipl-2023-final-fixed-runner-up-csk-image-at-narendra-modi-stadium-screen-kannada-news-zp-589190.html

Leave a Reply

Your email address will not be published. Required fields are marked *