Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • NAM vs KAR: ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ ಕರ್ನಾಟಕ
Sports

NAM vs KAR: ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ ಕರ್ನಾಟಕ

May 31, 2023
samagrasuddi

ರಾಷ್ಟ್ರೀಯ ತಂಡದ ವಿರುದ್ಧ ಏಕದಿನ ಸರಣಿ ಆಡಲು ಕರ್ನಾಟಕ ತಂಡ ನಮೀಬಿಯಾಗೆ ತೆರಳಿದೆ. ಇಲ್ಲಿ ನಮೀಬಿಯಾ ಅಂತಾರಾಷ್ಟ್ರೀಯ ತಂಡವಾದರೆ, ಕರ್ನಾಟಕ ಭಾರತದ ದೇಶೀಯ ತಂಡ ಎಂಬುದು ವಿಶೇಷ.ಜೂನ್ 2 ರಿಂದ ಶುರುವಾಗಲಿರುವ ಈ ಏಕದಿನ ಸರಣಿಯಲ್ಲಿ ಒಟ್ಟು 5  ಪಂದ್ಯಗಳನ್ನಾಡಲಿದೆ. ನಮೀಬಿಯಾ ರಾಷ್ಟ್ರ ರಾಜಧಾನಿ ವಿಂಡ್‌ಹೋಕ್‌ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಕರ್ನಾಟಕ ತಂಡವನ್ನು ರವಿಕುಮಾರ್ ಸಮರ್ಥ್ ಮುನ್ನಡೆಸುವ ಸಾಧ್ಯತೆಯಿದೆ.ಇನ್ನು ಕರ್ನಾಟಕ ತಂಡದಲ್ಲಿ ಕಿರಿಯ ಆಟಗಾರರಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ಅದರಂತೆ ತಂಡದಲ್ಲಿ ಅನೀಶ್ವರ್ ಗೌತಮ್, ವೈಶಾಕ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಎಲ್​ಆರ್​ ಚೇತನ್, ನಿಕಿನ್ ಜೋಸ್ ಸೇರಿದಂತೆ ಯುವ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ನಮೀಬಿಯಾ ವಿರುದ್ಧದ ಸರಣಿಯಲ್ಲಿ ಕನ್ನಡಿಗರ ಪ್ರದರ್ಶನ ಹೇಗಿರಲಿದೆ ಎಂಬ ಕುತೂಹಲ ಏರ್ಪಟ್ಟಿದೆ.
ಮತ್ತೊಂದೆಡೆ ಕಳೆದ ವರ್ಷ ಟಿ20 ವಿಶ್ವಕಪ್ ಆಡಿದ್ದ ನಮೀಬಿಯಾ ತಂಡವು ಈ ಬಾರಿಯ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಮಾರ್ಚ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿಯಲ್ಲಿ ಮೂರನೇ ಸ್ಥಾನ ಗಳಿಸಲಷ್ಟೇ ಶಕ್ತರಾದರು. ಹೀಗಾಗಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ನಮೀಬಿಯಾ ತಂಡ ಕಾಣಿಸಿಕೊಳ್ಳುವುದಿಲ್ಲ.ಅಂದಹಾಗೆ ಕರ್ನಾಟಕ ತಂಡ ವಿದೇಶಿ ಟೀಮ್ ಜೊತೆ ಆಡುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಯುಎಸ್ಎ ವಿರುದ್ಧ ಸೀಮಿತ ಓವರ್‌ಗಳ ಸರಣಿ ಆಡಿ ಜಯ ಸಾಧಿಸಿತ್ತು. ಇದೀಗ ಐಸಿಸಿ ಸಹಾಯಕ ಸದಸ್ಯ ರಾಷ್ಟ್ರವಾಗಿರುವ ನಮೀಬಿಯಾ ವಿರುದ್ಧ ಆಡುತ್ತಿರುವುದು ವಿಶೇಷ.
ನಮೀಬಿಯಾ ವಿರುದ್ಧದ ಸರಣಿಗೆ ಕರ್ನಾಟಕ ಏಕದಿನ ತಂಡ ಹೀಗಿದೆ: ಸಮರ್ಥ್ ಆರ್, ವಿಶಾಲ್ ಓನಾಟ್, ನಿಕಿನ್ ಜೋಸ್, ಕೆವಿ ಸಿದ್ಧಾರ್ಥ್, ಕಿಶನ್ ಬಿದರೆ, ಕೃತಿಕ್ ಕೃಷ್ಣ, ಶುಭಾಂಗ್ ಹೆಗ್ಡೆ, ವೈಶಾಖ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಅನೀಶ್ವರ್ ಗೌತಮ್, ಲೋಚನ್ ಅಪ್ಪಣ್ಣ, ಚೇತನ್ ಎಲ್ಆರ್, ಆದಿತ್ಯ ಗೋಯಲ್, ರಿಷಿ ಬೊಪ್ಪಣ್ಣ.

source https://tv9kannada.com/photo-gallery/cricket-photos/karnataka-team-to-tour-namibia-for-one-day-series-kannada-news-zp-591154.html

Tags: Cricket, samagrasuddi, ಸಮಗ್ರ ಸುದ್ದಿ

Post navigation

Wrestlers Protest: ನಿಮಗೆ ಹಾನಿಯಾಗುವ ಕ್ರಮಗಳನ್ನು ತೆಗೆದುಕೊಳ್ಳಬೇಡಿ: ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್
Fact Check: ನರೇಂದ್ರ ಮೋದಿ ಸ್ಟೇಡಿಯಂನ ಪಿಚ್ ಒಣಗಿಸಲು ಹೇರ್ ಡ್ರೈಯರ್, ಇಸ್ತ್ರಿ ಪೆಟ್ಟಿಗೆ ಬಳಕೆ?; ವೈರಲ್ ಫೋಟೊ ಐಪಿಎಲ್​​ನದ್ದು ಅಲ್ಲ

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನರೇನಹಾಳ್ ಗ್ರಾಮದಲ್ಲಿ ಭಾರತೀಯ ಯೋಗ ಶಿಕ್ಷಣ ಬಾಲಗೋಕುಲ ಕಾರ್ಯಕ್ರಮ:
  • “IND vs ENG”: ಗಿಲ್ ಶತಕ, ಸಿರಾಜ್- ಆಕಾಶ್ ಮಾರಕ ದಾಳಿ; ದಿನದಾಟದಂತ್ಯಕ್ಕೆ ಇಂಗ್ಲೆಂಡ್ 72/3
  • “Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?
  • “Horoscope Today 06 July”: ಇಂದು ಈ ರಾಶಿಯವರಿಗೆ ಪುಣ್ಯ ಕರ್ಮಗಳನ್ನು ಮಾಡಲು ಅನಿರೀಕ್ಷಿತ ಅವಕಾಶ.
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress