David Warner: ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್ ವಾರ್ನರ್

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ತಮ್ಮ ನಿವೃತ್ತಿ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ವಾರ್ನರ್, ಮುಂದಿನ ವರ್ಷ ನಾನು ನಿವೃತ್ತಿ ನೀಡುವುದಾಗಿ ಹೇಳಿದ್ದಾರೆ.2024 ರಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ್ ನಡುವಣ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಒಂದು ಪಂದ್ಯವು ಸಿಡ್ನಿ ಮೈದಾನದಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲು ಬಯಸಿದ್ದೇನೆ ಎಂದು ವಾರ್ನರ್ ತಿಳಿಸಿದ್ದಾರೆ.ಇದಾಗ್ಯೂ ಸೀಮಿತ ಓವರ್​ಗಳಲ್ಲಿ ಮುಂದುವರೆಯಲು ವಾರ್ನರ್ ಬಯಸಿದ್ದಾರೆ. ಅದರಂತೆ 2024 ರಲ್ಲಿ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವ ಇರಾದೆ ಹೊಂದಿರುವುದಾಗಿ ತಿಳಿಸಿರುವ ವಾರ್ನರ್, ಆ ವಿಶ್ವಕಪ್​ನ ಆಸ್ಟ್ರೇಲಿಯಾ ತಂಡದ ಕೊನೆಯ ಪಂದ್ಯ ನನ್ನ ಅಂತಿಮ ಪಂದ್ಯವಾಗಿರಲಿದೆ ಎಂದಿದ್ದಾರೆ.ನಾನು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನನಗೆ WTC ನಲ್ಲಿ ಮತ್ತು ಆ್ಯಶಸ್​ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ, ವೆಸ್ಟ್ ಇಂಡೀಸ್ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸುತ್ತೇನೆ. ಈ ಮೂಲಕ ಮುಂದಿನ ಜನವರಿ 3 ರಿಂದ ಶುರುವಾಗಲಿರುವ ಪಾಕ್​ ವಿರುದ್ಧದ ಪಂದ್ಯದದೊಂದಿಗೆ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ವಾರ್ನರ್ ಸ್ಪಷ್ಟಪಡಿಸಿದ್ದಾರೆ.
ಸದ್ಯ 36 ವರ್ಷದ ಡೇವಿಡ್ ವಾರ್ನರ್ 102 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 187 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ವಾರ್ನರ್ ಒಟ್ಟು 8158 ರನ್​ ಕಲೆಹಾಕಿದ್ದಾರೆ.ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯಕ್ಕಾಗಿ ವಾರ್ನರ್ ಸಜ್ಜಾಗುತ್ತಿದ್ದಾರೆ. ಅದರಲ್ಲೂ ಜೂನ್ 16 ರಿಂದ ಶುರುವಾಗಲಿರುವ ಇಂಗ್ಲೆಂಡ್​ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಸರಣಿಯಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಆತ್ಮ ವಿಶ್ವಾಸದಲ್ಲಿದ್ದಾರೆ ಹಿರಿಯ ಆಟಗಾರ.

source https://tv9kannada.com/photo-gallery/cricket-photos/australias-david-warner-reveals-test-retirement-plans-kannada-news-zp-593402.html

Leave a Reply

Your email address will not be published. Required fields are marked *