WTC Final 2023, IND vs AUS: ಲಂಡನ್​ನ ಓವಲ್ ಮೈದಾನಕ್ಕೆ ಬಂದ ಟೀಮ್ ಇಂಡಿಯಾ ಆಟಗಾರರು: ಮಿಸ್ಟ್ರಿ ಪಿಚ್ ಕಂಡು ಶಾಕ್?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 7 ರಿಂದ 11 ರ ವರೆಗೆ ಈ ಮಹತ್ವದ ಪಂದ್ಯ ನಡೆಯಲಿದ್ದು, ಇನ್ನು ಕೇವಲ ಎರಡು ದಿನವಷ್ಟೇ ಬಾಕಿಯಿದೆ.ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಟೀಮ್ ಇಂಡಿಯಾದ ಎಲ್ಲ ಆಟಗಾರರು ಇದೀಗ ಲಂಡನ್​ನ ಓವಲ್ ಕ್ರೀಡಾಂಗಣಕ್ಕೆ ಕಾಲಿಟ್ಟಿದ್ದಾರೆ. ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.ಮಿಸ್ಟ್ರಿ ಪಿಚ್ ಎಂದೇ ಹೇಳಲಾಗುವ ಕೆನ್ನಿಂಗ್ಟನ್ ಓವಲ್​ನಲ್ಲಿ ಭಾರತೀಯರು ಅಭ್ಯಾಸ ಶುರುಮಾಡಿಕೊಂಡಿದ್ದಾರೆ. ಮುಖ್ಯವಾಗಿ ಬೌಲರ್​ಗಳು ಉತ್ತಮವಾಗಿ ಅಭ್ಯಾಸ ನಡೆಸುತ್ತಿದ್ದಾರೆ.ವಿಶ್ವದ ಎರಡನೇ ಅತ್ಯಂತ ಹಳೆಯ ಕ್ರೀಡಾಂಗಣವಾದ ಓವಲ್ ಈ ಹಿಂದೆ ವೇಗಿಗಳಿಗೆ ಅನುಕೂಲಕರವಾಗಿದ್ದರೆ, ಕಳೆದ ಆರು ಪಂದ್ಯಗಳು ಇದಕ್ಕೆ ವಿರುದ್ಧವಾಗಿ ಕಂಡವು. 2016 ರಿಂದ ಓವಲ್‌ನಲ್ಲಿ ನಡೆದ ಕೊನೆಯ 6 ಟೆಸ್ಟ್‌ಗಳು ದಿನಗಳು ಕಳೆದಂತೆ ಪಿಚ್ ಕ್ರಮೇಣ ಉತ್ತಮಗೊಳ್ಳುತ್ತವೆ ಎಂದು ತೋರಿಸಿದೆ.ಇಲ್ಲಿ ಮೊದಲ ಇನ್ನಿಂಗ್ಸ್ ಸರಾಸರಿ ಸ್ಕೋರ್ 269 ಆಗಿದೆ, ಎರಡನೇ ಇನ್ನಿಂಗ್ಸ್‌ನಲ್ಲಿ 280 ಕ್ಕೆ ಹೆಚ್ಚಾಗುತ್ತದೆ ಮತ್ತು ಮೂರನೇ ಇನ್ನಿಂಗ್ಸ್‌ನಲ್ಲಿ 326 ರ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಹೀಗಾಗಿ ಓವಲ್‌ನಲ್ಲಿ ಆಟವು ಸಾಗುತ್ತಿದ್ದಂತೆ ಬ್ಯಾಟಿಂಗ್​ಗೆ ಸುಲಭವಾಗುತ್ತದೆ ಎಂದು ಸೂಚಿಸುತ್ತದೆ.ಟೀಮ್ ಇಂಡಿಯಾ ನಾನಾ ವಿಧದಲ್ಲಿ ಅಭ್ಯಾಸ ನಡೆಸುತ್ತಿದೆ. ಆಟಗಾರರು ಕ್ಯಾಚ್‌ ಅಭ್ಯಾಸಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಭಾರತದ ಎಲ್ಲ ಪ್ಲೇಯರ್ಸ್ ಬೇರೆಬೇರೆ ಬಣ್ಣಗಳ ಚೆಂಡುಗಳಲ್ಲಿ ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂದಿದೆ. ಐಪಿಎಲ್​ನಲ್ಲಿ ಬಿಳಿ ಬಣ್ಣದ ಚೆಂಡನ್ನು ಉಪಯೋಗಿಸಿರುವುದರಿಂದ ಕೆಂಪು ಚೆಂಡಿನ ಬಳಕೆಗೆ ಒಗ್ಗಿಸುವ ಹಾದಿಯಲ್ಲಿ ಇದೊಂದು ತಂತ್ರವಾಗಿದೆ.ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾದರೆ ಇದುವರೆಗಿನ ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡವೂ ಮಾಡಲಾಗದ ಅಪರೂಪದ ದಾಖಲೆಯೊಂದನ್ನು ಬರೆಯಲಿದೆ. ಆಸೀಸ್ ವಿರುದ್ಧ ಭಾರತ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದರೆ, ಏಕದಿನ, ಟಿ20 ಮತ್ತು ಟೆಸ್ಟ್ ಮೂರು ಮಾದರಿಗಳಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

source https://tv9kannada.com/photo-gallery/cricket-photos/team-india-has-kickstarted-their-practice-session-at-the-oval-for-world-test-championship-final-vb-594301.html

Leave a Reply

Your email address will not be published. Required fields are marked *