Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • Travis Head: ಟೀಮ್ ಇಂಡಿಯಾ ವಿರುದ್ಧ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಟ್ರಾವಿಸ್ ಹೆಡ್
Sports

Travis Head: ಟೀಮ್ ಇಂಡಿಯಾ ವಿರುದ್ಧ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಟ್ರಾವಿಸ್ ಹೆಡ್

June 7, 2023
samagrasuddi

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಪರಿಣಾಮ ಕೇವಲ 60 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.ಇನ್ನು ಅರ್ಧಶತಕದ ಬಳಿಕ ಕೂಡ ಟೀಮ್ ಇಂಡಿಯಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಹೆಡ್ 14 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಯಿತು.ಇದಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ನ್ಯೂಜಿಲೆಂಡ್​ನ ಡೆವೊನ್ ಕಾನ್ವೆ ಹೆಸರಿನಲ್ಲಿತ್ತು. 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಾನ್ವೆ 54 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು.
ಇದೀಗ ಓವಲ್ ಮೈದಾನದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಟ್ರಾವಿಸ್ ಹೆಡ್ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ವಿರುದ್ಧದ ಚೊಚ್ಚಲ ಶತಕದೊಂದಿಗೆ ಎಂಬುದು ವಿಶೇಷ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ (ಉಸ್ಮಾನ್ ಖ್ವಾಜಾ), ಶಾರ್ದೂಲ್ ಠಾಕೂರ್ (ಡೇವಿಡ್ ವಾರ್ನರ್) ಹಾಗೂ ಮೊಹಮ್ಮದ್ ಶಮಿ (ಮಾರ್ನಸ್ ಲಾಬುಶೇನ್) ತಲಾ 1 ವಿಕೆಟ್ ಪಡೆದಿದ್ದಾರೆ.

source https://tv9kannada.com/photo-gallery/cricket-photos/travis-head-becomes-the-first-batter-to-score-a-hundred-in-the-wtc-final-kannada-news-zp-596370.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC Final 2023: ಡಬ್ಲ್ಯುಟಿಸಿ ಫೈನಲ್ ಪಂದ್ಯಗಳು ಇಂಗ್ಲೆಂಡ್‌ನಲ್ಲೇ ನಡೆಯುತ್ತಿರುವುದ್ಯಾಕೆ? ಇಲ್ಲಿದೆ ವಿವರ
ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ್ದು ಯಾರು ಗೊತ್ತೇ?

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭ.
  • ನಮ್ಮ ಜನಾಂಗದಿಂದಲೇ ಸರ್ವೆಯನ್ನು ಮಾಡಿಸುವುದರ ಮೂಲಕ ಮುಂದಿನ ಮೂರು ತಿಂಗಳಲ್ಲಿ ಸರ್ಕಾರಕ್ಕೆ ವರದಿಯನ್ನು ನೀಡಲಾಗುವುದು: ಬಿ.ಎಸ್.ಸೋಮಶೇಖರ್.
  • ಕಾಂಗ್ರೆಸ್ ಪಕ್ಷದವರಿಂದ ಸುಳ್ಳಿನ ಅಪ ಪ್ರಚಾರ ; ಬಿಜೆಪಿ ವಕ್ತಾರ ನಾಗರಾಜ್ ಬೇದ್ರೇ.
  • ಸ್ಥಗಿತಗೊಂಡ ಕಾಮಗಾರಿ ಪುನರಾರಂಭಿಸಿ: ಪಪ್ಪಿ ಸ್ಟೂಡೆಂಟ್ ಸದಸ್ಯರು ಮನವಿ.
  • 2025-2026ನೇ ಸಾಲಿನ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭ.
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress