ಪ್ರಭಾಸ್‌ ʼಪ್ರಾಜೆಕ್ಟ್‌ ಕೆʼ ಸಿನಿಮಾದಲ್ಲಿ ಕಮಲ್‌ ಹಾಸನ್‌ : ಡಾರ್ಲಿಂಗ್‌ ಚಿತ್ರದಲ್ಲಿ ವಿಶ್ವ ನಾಯಕ ವಿಲನ್‌..!

Prabhas Project K : ನಟ ಪ್ರಭಾಸ್‌ ಮತ್ತು ನಾಗ್‌ ಅಶ್ವಿನ್‌ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಕಮಲ್‌ ಹಾಸನ್‌ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ಕಮಲ್‌ ವಿಲನ್‌ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ.

Kamal haasan in Project K : ರೆಬಲ್‌ ಸ್ಟಾರ್‌ ಪ್ರಭಾಸ್ ನಟನೆಯ ಮುಂಬರುವ ಚಿತ್ರ ‘ಪ್ರಾಜೆಕ್ಟ್ ಕೆ’ ನಲ್ಲಿ ಕಮಲ್ ಹಾಸನ್ ಕಾಣಿಸಿಕೊಳ್ಳಲಿದ್ದಾರೆ. ಈ ವೈಜ್ಞಾನಿಕ ಕಾಲ್ಪನಿಕ ಚಿತ್ರದಲ್ಲಿ ಕಮಲ್ ವಿಲನ್‌ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಈ ಸಿನಿಮಾದಲ್ಲಿ ಇದರಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಹೌದು ಈಗಾಗಲೇ ಪ್ರಭಾಸ್‌ಗೆ ಜೊತೆಯಾಗಿ ದೀಪಿಕಾ ಪಡುಕೋಣೆ ಪ್ರಾಜೆಕ್ಟ್‌ ಕೆ ಸಿನಿಮಾದಲ್ಲಿ ನಟಿಸುವ ವಿಚಾರ ಎಲ್ಲಿರಿಗೂ ತಿಳಿದಿದೆ. ಇದೀಗ ವಿಶ್ವನಾಯಕ ನಟ ಕಮಲ್‌ ಹಾಸನ್‌ ಪ್ರಾಜೆಕ್ಟ್‌ ಕೆ ನ ಭಾಗವಾಗಲಿದ್ದಾರೆ ಎನ್ನುವ ಸುದ್ದಿಯೊಂದು ಟ್ವಿಟರ್‌ನಲ್ಲಿ ಹರಿದಾಡುತ್ತಿದೆ. ಅಲ್ಲದೆ, ಈ ಚಿತ್ರದಲ್ಲಿ ಪ್ರಭಾಸ್‌ ಎದುರು ವಿಲನ್‌ ಪಾತ್ರದಲ್ಲಿ ಕಮಲ್‌ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ವರದಿಗಳ ಪ್ರಕಾರ, ಆಗಸ್ಟ್ 2023 ರ ಆರಂಭದಲ್ಲಿ ನಾಗ್ ಅಶ್ವಿನ್ ನಿರ್ದೇಶನದ ಪ್ರಾಜೆಕ್ಟ್‌ ಕೆ ತಂಡವನ್ನು ಕಮಲ್‌ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಈಗಾಗಲೇ ಕಾರ್ತಿಕ್‌, ಕಮಲ್ ಹಾಸನ್ ಅವರ ದೃಶ್ಯಗಳ ಚಿತ್ರೀಕರಣಕ್ಕಾಗಿ ವೇಳಾಪಟ್ಟಿಯನ್ನು ಸಿದ್ಧಗೊಳಿಸಿದ್ದಾರೆ ಎಂಬ ವಂದಂತಿಯೂ ಸಹ ಹರಿದಾಡುತ್ತಿದೆ. ಇಷ್ಟೆ ಅಲ್ಲ, ಈ ಚಿತ್ರದಲ್ಲಿ ನಟಿಸಲು ಕಮಲ್‌ ಬರೋಬ್ಬರಿ 100 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದ್ದ, ಕಮಲ್‌ ಮತ್ತು ಪ್ರಭಾಸ್‌ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಲ್ಲದೆ, ಈ ಸಿನಿಮಾ ಹಿಸ್ಟರಿ ಕ್ರಿಯೇಟ್‌ ಮಾಡುತ್ತದೆ, ಬ್ಲಾಕ್ಬಸ್ಟರ್‌ ಆಗಲಿದೆ ಎಂದು ಫ್ಯಾನ್ಸ್‌ ಕಾಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಈ ಫ್ಯೂಚರಿಸ್ಟಿಕ್ ವೈಜ್ಞಾನಿಕ ಆಕ್ಷನ್ ಚಿತ್ರದಲ್ಲಿ ಕಮಲ್ ಹಾಸನ್ ಹಿಂದೆಂದೂ ನೋಡಿರದ ಅವತಾರವಾಗಿ ಕಾಣಿಸಬಹುದು ಅಂತ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

‘ಪ್ರಾಜೆಕ್ಟ್ ಕೆ’ ದೀಪಿಕಾ ಪಡುಕೋಣೆ ಅವರ ಚೊಚ್ಚಲ ತೆಲುಗು ಚಿತ್ರವಾಗಿದೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ದಿಶಾ ಪಟಾನಿ ನಟಿಸುವ ಸಾಧ್ಯತೆಯಿದೆ. ದಕ್ಷಿಣ ಚಿತ್ರರಂಗದ ಅನೇಕ ಪ್ರಮುಖ ನಟರು ವಿಶೇಷ ಅತಿಥಿ ಪಾತ್ರಗಳಲ್ಲಿ ಕಾಣಿಸೊಳ್ಳಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಮತ್ತು ಮೊದಲ ಭಾಗವು ಜನವರಿ 12, 2024 ರ ಮಕರ ಸಂಕ್ರಾಂತಿಯಂದು ಥಿಯೇಟರ್‌ಗಳಲ್ಲಿ ಬರುವ ನಿರೀಕ್ಷೆಯಿದೆ.

Source : https://zeenews.india.com/kannada/entertainment/kamal-haasan-acting-prabhas-project-k-movie-140388

Leave a Reply

Your email address will not be published. Required fields are marked *