
ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ 30/12/2022 ರ ಶುಕ್ರವಾರ ಮುಂಜಾನೆ 3:39 ಕ್ಕೆ ಯುಎನ್ ಮೆಹ್ತಾ ಹೃದಯ ಆಸ್ಪತ್ರೆಯಲ್ಲಿ ನಿಧನರಾದರು.
ಅಹಮದಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಮಧ್ಯರಾತ್ರಿ ನಿಧನರಾದರು.
ಹೀರಾಬೆನ್ ಇತ್ತೀಚೆಗೆ ತಮ್ಮ 100 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.
ಹೀರಾಬೆನ್ ನಿಧನಕ್ಕೆ ಪ್ರಧಾನಿ ಮೋದಿ ಭಾವುಕರಾಗಿ “ನೂರು ವರ್ಷ ಪೂರೈಸಿದ ನಂತರ ನನ್ನ ತಾಯಿ ದೇವರ ಪಾದ ತಲುಪಿದ್ದಾಳೆ. ಆಕೆಯ ಜೀವನ ಪಯಣ ತಪಸ್ಸಿನಂತೆ,” ಎಂದು ಟ್ವೀಟ್ ಮಾಡಿದ್ದಾರೆ.
शानदार शताब्दी का ईश्वर चरणों में विराम… मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है। pic.twitter.com/yE5xwRogJi
— Narendra Modi (@narendramodi) December 30, 2022
ಹೀರಾಬೆನ್ ಮೋದಿ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ಸಮೀಪದ ರೇಸನ್ ಗ್ರಾಮದಲ್ಲಿ ವಾಸಿಸುತ್ತಿದ್ದರು.
ಪ್ರಧಾನಮಂತ್ರಿಯವರು ತಮ್ಮ ಗುಜರಾತ್ ಭೇಟಿಗಳಲ್ಲಿ ನಿಯಮಿತವಾಗಿ ರೈಸನ್ಗೆ ಭೇಟಿ ನೀಡುತ್ತಿದ್ದರು ಮತ್ತು ಅವರ ತಾಯಿಯೊಂದಿಗೆ ಸಮಯ ಕಳೆಯುತ್ತಿದ್ದರು.
The post ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ವಿಧಿವಶ first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/hWFNrT4
via IFTTT