ಚಿತ್ರದುರ್ಗ: ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಪಾರದರ್ಶಕತೆ ತರುವ ಸಲುವಾಗಿ ಹಾಗೂ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಬಿಲ್ ಕಲೆಕ್ಟರ್ ಗಳಿಗೆ ತರಬೇತಿಯನ್ನು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿತ್ತು.

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತರಬೇತಿ ಕಾರ್ಯಗಾರವನ್ನು ಎಂ. ಎಸ್. ದಿವಾಕರ್ ಉದ್ಘಾಟಿಸಿದರು.
ತೆರಿಗೆ ಸೇರಿದಂತೆ ಇತರೆ ಫೀಜ್ಗಳನ್ನು ವಸೂಲು ಮಾಡಲು ಆಂಡ್ರಾಯ್ಡ್ ಪಿ ಓ ಎಸ್ ಉಪಕರಣವನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಕ್ಸಿಸ್ ಬ್ಯಾಂಕ್ ವತಿಯಿಂದ ನೀಡಲಾಗಿದೆ.
ಕಾರ್ಯಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾಕ್ಟರ್ ರಂಗಸ್ವಾಮಿ ಉಪಸ್ಥಿತರಿದ್ದರು.
Source : https://suddione.com/pos-training-for-pdos-and-bill-collectors/