ಟೀಂ ಇಂಡಿಯಾ ಸ್ಟಾರ್ ಆಟಗಾರ ರಿಷಬ್ ಪಂತ್ ಸ್ಥಿತಿ ಈಗ ಹೇಗಿದೆ..?

ನವದೆಹಲಿ: ಭಾರತೀಯ ಕ್ರಿಕೆಟ್ ತಂಡಸ ಸ್ಟಾರ್ ಆಟಗಾರ ರಿಷಬ್ ಪಂತ್ ಕಾರು ಅಪಘಾತವಾಗಿದ್ದು, ರಿಷಬ್ ಪಂತ್ ಅವರಿಗೆ ಹಣೆ ಮತ್ತು ಬೆನ್ನಿಗೆ ಗಂಭೀರ ಗಾಯವಾಗಿತ್ತು. ಉತ್ತರಖಾಂಡದಿಂದ ದೆಹಲಿಗೆ ಹಿಂತಿರುಗುತ್ತಿದ್ದ ವೇಳೆ ಈ ರೀತಿಯ ಘಟನೆ ನಡೆದಿತ್ತು.

ಈ ಘಟನೆಯಲ್ಲಿ ಪಂತ್ ಗಂಭೀರ ಗಾಯಗೊಂಡಿದ್ದರಿಂದ ಅವರನ್ನು ತಕ್ಷಣ ರೂರ್ಕಿಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಪಂತ್ ಅವರ ಪ್ರಾಣಕ್ಕೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಇರಿಸಿ, ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕೆಲವೊಂದು ಸರ್ಜರಿಗಳನ್ನು ಮಾಡಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಸರ್ಜರಿಗೂ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ವಿಷಯ ತಿಳಿದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಸ್ಥಳಕ್ಕೆ ಧಾವಿಸಿ, ಮಾಹಿತಿ ಪಡೆದಿದ್ದಾರೆ.

The post ಟೀಂ ಇಂಡಿಯಾ ಸ್ಟಾರ್ ಆಟಗಾರ ರಿಷಬ್ ಪಂತ್ ಸ್ಥಿತಿ ಈಗ ಹೇಗಿದೆ..? first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/aVBdwMn
via IFTTT

Leave a Reply

Your email address will not be published. Required fields are marked *