Threat calls to Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಜಯೇಶ್ ಪೂಜಾರಿಗೂ ಮತ್ತು ಜಮ್ಮು ಕಾಶ್ಮೀರದಲ್ಲಿ ಲಷ್ಕರ್-ಎ-ತೊಯ್ಬಾಗೆ ಭಯೋತ್ಪಾದಕರನ್ನು ನೇಮಿಸಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಅಫ್ಸರ್ ಪಾಷಾನಿಗೂ ನಂಟಿರುವುದು ತನಿಖೆ ವೇಳೆ ಬಯಲಾಗಿದೆ.

ನವದೆಹಲಿ: ಈ ವರ್ಷದ ಆರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಜಯೇಶ್ ಪೂಜಾರಿ ಮತ್ತು ಬೆಂಗಳೂರು ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಆರೋಪಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಅಫ್ಸರ್ ಪಾಷಾ ನಡುವೆ ಸಂಪರ್ಕವಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಿಂದೆ ಲಷ್ಕರ್ ಇ ತೋಯ್ಬಾ ಸಂಘಟನೆ ಉಗ್ರನ ಪ್ರಚೋದನೆ ಇರುವ ವಿಚಾರ ಹೊರಬಿದ್ದಿದೆ. ಜಯೇಶ್ ಪೂಜಾರಿ ಅಲಿಯಾಸ್ ಕಾಂತ ಮತ್ತು ಶಾಕೀರ್ ಈ ಹಿಂದೆ ಪಾಷಾ ಜೊತೆಗೆ ಬೆಳಗಾವಿ ಜೈಲಿನಲ್ಲಿದ್ದರು. ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಜನವರಿ 14 ರಂದು ಪೂಜಾರಿ ಬೆದರಿಕೆ ಕರೆ ಮಾಡಿ ₹ 100 ಕೋಟಿಗೆ ಬೇಡಿಕೆಯಿಟ್ಟಿದ್ದ. ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿದ್ದ. ಈ ವೇಳೆ ಪೂಜಾರಿಯನ್ನು ಕರ್ನಾಟಕದ ಜೈಲಿನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 21 ರಂದು ಮತ್ತೊಂದು ಬಾರಿ ಕರೆ ಮಾಡಿದ ಪೂಜಾರಿ ಅಲಿಯಾಸ್ ಕಾಂತ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ. ₹10 ಕೋಟಿ ನೀಡದಿದ್ದರೆ ತೊಂದರೆ ಗ್ಯಾರೆಂಟಿ ಎಂದು ಬೆದರಿಕೆ ಹಾಕಿದ್ದ. ನಂತರ ಪೂಜಾರಿಯನ್ನು ಬಂಧಿಸಿ ಮಾರ್ಚ್ 28 ರಂದು ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಕರೆತರಲಾಯಿತು. ಆ ಬಳಿಕ ಬಳಿಕ ನಾಗ್ಪುರ ಪೊಲೀಸರು ನಡೆಸಿದ ತನಿಖೆಯಲ್ಲಿ ಪೂಜಾರಿ ಮತ್ತು ಭಯೋತ್ಪಾದಕ ಬಶೀರುದ್ದೀನ್ ನೂರ್ ಅಹ್ಮದ್ ಅಲಿಯಾಸ್ ಅಫ್ಸರ್ ಪಾಷಾ ನಡುವೆ ಸಂಪರ್ಕ ಇರುವ ವಿಚಾರ ಬಯಲಾಗಿದೆ.
2012ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಭಯೋತ್ಪಾದಕರನ್ನು ನೇಮಿಸಿದ ಪ್ರಕರಣದಲ್ಲಿ ಅಫ್ಸರ್ ಪಾಷಾ ಬಂಧಿತನಾಗಿದ್ದ. ಈತನ ಜೊತೆ ಪೂಜಾರಿ ನಂಟು ಹೊಂದಿದ್ದ.
ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಅಫ್ಸರ್ ಫಾಷಾನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಿಂಡಲಗಾ ಜೈಲಿನಿಂದ ಮುಂಬೈಗೆ ಅಪ್ಸರ್ ಫಾಷಾ ಕರೆದೊಯ್ದಿದ್ದಾರೆ. ಎನ್ಐಎ ಅಧಿಕಾರಿಗಳುಬೆಳಗಾವಿಯಿಂದ ಮುಂಬೈವರೆಗೆ ರಸ್ತೆ ಮಾರ್ಗವಾಗಿ ಆರೋಪಿ ಕರೆದೊಯ್ದುರು.
ನಿನ್ನೆ ಇಡೀ ದಿನ ಅಪ್ಸರ್ ಫಾಷಾನನ್ನು ತೀವ್ರ ವಿಚಾರಣೆ ಒಳಪಡಿಸಲಾಗಿದೆ. ಬಳಿಕ ಮಹಾರಾಷ್ಟ್ರದ ನಾಗ್ಪುರ ಪೊಲೀಸರಿಗೆ ಅಪ್ಸರ್ ಪಾಷಾ ಹಸ್ತಾಂತರಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಅಪ್ಸರ್ ಪಾಷಾನನ್ನು ನಾಗ್ಪುರ ಪೊಲೀಸರು ಕರೆದೊಯ್ದಿದ್ದಾರೆ.
ಉಗ್ರ ಸಂಘಟನೆ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆಗೆ ನಂಟು ಆರೋಪದಡಿ ಬಂಧಿತನಾಗಿದ್ದ ಅಪ್ಸರ್ ಪಾಷಾ, ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ.