ಐದು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ..! ನಾಳೆ ಭಾರೀ ಮಳೆ ಸಾಧ್ಯತೆ

Heavy rain alart : ದೇಶದ ಕೆಲವೆಡೆ ಮೇಘಸ್ಫೋಟದ ಭೀತಿ ಎದುರಾಗಿದ್ದು, ಮೋಡ ಕವಿದ ವಾತಾವರಣ ಉಂಟಾಗಿದೆ. ಹೀಗಾಗಿ ಹವಾಮಾನ ಇಲಾಖೆ 5 ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಸಂಪೂರ್ಣ ವಿವರ ಇಂತಿದೆ..

Rain updates : ನೈರುತ್ಯ ಮುಂಗಾರು ಮಾರುತಗಳ ಪ್ರಭಾವದಿಂದ ಈಗಾಗಲೇ ಉತ್ತರ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ನಾಳೆ ಐದು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷಿ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜುಲೈ 17 ಎಂದರೆ ನಾಳೆ ಮೇಘ ಸ್ಪೋಟ ಸಂಭವಿಸುವ ಸಾಧ್ಯತೆ ಇದೆ.

ಈಗಾಗಲೆ ಉತ್ತರದ ರಾಜ್ಯಗಳನ್ನು ವರುಣಾರ್ಭಟ ಮುಂದುವರೆದಿದೆ. ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರ ಭಾಗವಾಗಿ ನಾಳೆ ಆ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು 5 ದಿನಗಳ ಕಾಲ ಮಹಾರಾಷ್ಟ್ರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಜುಲೈ 17 ರಂದು ಉತ್ತರಾಖಂಡದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಪ್ರದೇಶಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಈ ರಾಜ್ಯಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 19 ರಂದು ಗುಜರಾತ್‌ನಲ್ಲಿ ಭಾರೀ ಮಳೆಯಾಗಬಹುದು.

ಮತ್ತೊಂದೆಡೆ, ಜುಲೈ 18 ಮತ್ತು 19 ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ, ತೆಲಂಗಾಣ, ಕೇರಳ, ಮಹಾರಾಷ್ಟ್ರದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ರಾತ್ರಿ ಉತ್ತರಾಖಂಡ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಭಾರೀ ಮಳೆ ದಾಖಲಾಗಿದೆ.

Source : https://zeenews.india.com/kannada/india/heavy-rain-orange-alert-announced-for-five-states-146109

Leave a Reply

Your email address will not be published. Required fields are marked *