Gastritis Treatment : ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿರುವವರು ಈ ಕೆಳಗೆ ನೀಡಿರುವ ಸಲಹೆಗಳನ್ನು ಪ್ರತಿದಿನ ತಪ್ಪದೆ ಪಾಲಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ಇದಲ್ಲದೆ, ಮಲಬದ್ಧತೆ ಸಮಸ್ಯೆಗಳು ಸಹ ಸುಲಭವಾಗಿ ನಿವಾರಣೆಯಾಗುತ್ತವೆ.
![](https://samagrasuddi.co.in/wp-content/uploads/2023/07/image-26.png)
Gastritis remedies : ಭಾರತೀಯರು ಮಸಾಲೆಯುಕ್ತ ಆಹಾರವನ್ನು ಅತಿಯಾಗಿ ಸೇವನೆ ಮಾಡುತ್ತಾರೆ. ಇದು ಮಲಬದ್ಧತೆ ಮತ್ತು ಗ್ಯಾಸ್‌ನಂತಹ ಹೊಟ್ಟೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಗ್ಯಾಸ್ ಕಡಿಮೆ ಮಾಡಲು ಅನೇಕ ಔಷಧಿಗಳು ಮಾರುಕಟ್ಟೆಯಲ್ಲಿ ಲಭವಿದ್ದರು ಸಹ ಅವುಗಳು ದೇಹಕ್ಕೆ ಅಪಾಯಕಾರಿ. ಸದ್ಯ ಈ ಕೆಳಗೆ ನೀಡಿರುವ ಸಲಹೆಗಳನ್ನು ಪಾಲಿಸಿರಿ.
ಎಳನೀರು : ಹೊಟ್ಟೆಯ ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಎಳ ನೀರನ್ನು ಕುಡಿಯಬೇಕು. ಇದರಲ್ಲಿರುವ ಪೋಷಕಾಂಶಗಳು ದೇಹವನ್ನು ಹೈಡ್ರೇಟ್ ಆಗಿ ಇಡುತ್ತದೆ. ಇದಲ್ಲದೆ, ಇದರಲ್ಲಿರುವ ಗುಣಲಕ್ಷಣಗಳು ಜೀರ್ಣಕಾರಿ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುತ್ತದೆ.
ಸೌತೆಕಾಯಿ : ಈ ತರಕಾರಿ ದೇಹವನ್ನು ಆರೋಗ್ಯಕರವಾಗಿ ಮತ್ತು ಹೈಡ್ರೀಕರಿಸುವಲ್ಲಿ ಪರಿಣಾಮಕಾರಿಯಾಗಿದೆ. ಅಲ್ಲದೇ ದೇಹವನ್ನು ತಂಪಾಗಿಸುತ್ತದೆ. ಹೊಟ್ಟೆಯ ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿರುವವರು ಸೌತೆಕಾಯಿ ಸಲಾಡ್‌ನ್ನು ಪ್ರತಿದಿನ ಸೇವಿಸುವುದು ಬಹಳ ಒಳ್ಳೆಯದು.
ನಿಂಬೆ ನೀರು : ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ನಿಂಬೆ ನೀರನ್ನು ಕುಡಿಯಬೇಕು. ಇದರ ಗುಣಗಳು ಹೊಟ್ಟೆಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಇದು ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಬಾಳೆಹಣ್ಣು : ದೇಹವನ್ನು ಸದೃಢಗೊಳಿಸುವಲ್ಲಿ ಬಾಳೆಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿರುವ ನಾರಿನಾಂಶ ಅಸಿಡಿಟಿ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಬಾಳೆಹಣ್ಣಿನಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಕೂಡ ಸಮೃದ್ಧವಾಗಿದೆ. ಬೆಳಗಿನ ಉಪಾಹಾರದ ಭಾಗವಾಗಿ ಇದನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ.