Central Bank of India Recruitment 2023: ಬ್ಯಾಂಕಿಂಗ್ ನೇಮಕಾತಿಗೆ ಇಂದೇ ಅರ್ಜಿ ಸಲ್ಲಿಸಿ

Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಸೂಚನೆಯ ಪ್ರಕಾರ 21-45 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿ ಬಿಸಿನೆಸ್ ಕರೆಸ್ಪಾಂಡೆಂಟ್ ಮೇಲ್ವಿಚಾರಕ(BC Supervisor)ರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಯ ವಿವರ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3 ಬಿಸಿನೆಸ್ ಕರೆಸ್ಪಾಂಡೆಂಟ್ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮತ್ತು ಮೈಸೂರಿನಲ್ಲಿ ಕಾರ್ಯನಿರ್ಹಿಸಲು ಸಿದ್ಧರಾಗಿರಬೇಕು.

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, BE, M.Sc, MCA, MBA ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ 21 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 12,000 ರಿಂದ 15,000 ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ: ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಇದೇ ಜುಲೈ 28 ಆಗಿರುತ್ತದೆ

ಅರ್ಜಿ ಕಳುಹಿಸಬೇಕಾದ ವಿಳಾಸ: Central Bank of India, Regional Office Bangalore, 2nd Floor, Grand Majestic Mall Gandhinagar, Bengaluru – 560009.

ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‍ಸೈಟ್ centralbankofindia.co.in ಭೇಟಿ ನೀಡಬಹುದು.

Source : https://zeenews.india.com/kannada/business/central-bank-of-india-recruitment-2023-check-post-qualification-and-how-to-apply-147926

Leave a Reply

Your email address will not be published. Required fields are marked *