IPPB Jobs: ಡಿಗ್ರಿ ಪಾಸಾದವರಿಗೆ ಬ್ಯಾಂಕ್‍ನಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ

IPPB Recruitment 2023: ಆನ್​ಲೈನ್ ಟೆಸ್ಟ್, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನವಿರುತ್ತದೆ.

ನವದೆಹಲಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್‍ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 132 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  

ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ನಲ್ಲಿ ಖಾಲಿ ಇರುವ 132 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಒಬಿಸಿ (NCL) ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ, PWD (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, PWD (OBC/NCL) ಅಭ್ಯರ್ಥಿಗಳಿಗೆ 13 ವರ್ಷ ಮತ್ತು PWD (SC/ST) ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: SC/ST/PWD ಅಭ್ಯರ್ಥಿಗಳಿಗೆ 100 ರೂ. ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವಿರುತ್ತದೆ. ಆನ್‍ಲೈನ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನವಿರುತ್ತದೆ.

ಆಯ್ಕೆ ಪ್ರಕ್ರಿಯೆ: ಆನ್​ಲೈನ್ ಟೆಸ್ಟ್, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಜುಲೈ 26ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾತಿಗೆ ಅಭ್ಯರ್ಥಿಗಳು careers@ippbonline.inಗೆ ಮೇಲ್ ಮಾಡಬಹುದಾಗಿದೆ.

Source : https://zeenews.india.com/kannada/business/ippb-recruitment-2023-bank-jobs-for-graduates-apply-today-148602

Views: 0

Leave a Reply

Your email address will not be published. Required fields are marked *