IND vs WI, 3rd T20, Team India probable playing XI: ಭಾರತ ಈ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಉಳಿಯಬೇಕಾದರೆ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು.

IND vs WI, 3rd T20, Team India probable playing XI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೂರನೇ ಪಂದ್ಯ ಇಂದು ರಾತ್ರಿ 8 ಗಂಟೆಗೆ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ವಶಪಡಿಸಿಕೊಂಡಿರುವ ಟೀಂ ಇಂಡಿಯಾ ತನ್ನ ತಪ್ಪುಗಳಿಂದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ 0-2 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ.
ಭಾರತ ಈ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಉಳಿಯಬೇಕಾದರೆ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು. ಸತತ ಎರಡು ಸೋಲುಗಳ ನಂತರ ಮೂರನೇ ಟಿ20 ಪಂದ್ಯಕ್ಕಾಗಿ ಪ್ಲೇಯಿಂಗ್ 11ನಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೇಗಿದೆ ಎಂದು ನೋಡೋಣ.
ಆರಂಭಿಕ ಬ್ಯಾಟ್ಸ್‌ಮನ್:
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್ಮನ್ ಗಿಲ್ ಅವರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಹೀಗಾದರೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ನಂಬರ್-5ಕ್ಕೆ ಶಿಫ್ಟ್ ಮಾಡಲಾಗುತ್ತದೆ. ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಜೋಡಿ ತುಂಬಾ ಅಪಾಯಕಾರಿ ಮತ್ತು ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಪವರ್-ಪ್ಲೇನಲ್ಲಿ ರನ್ ಲೂಟಿ ಮಾಡುವಲ್ಲಿ ಪರಿಣತಿ ಹೊಂದಿದ್ದಾರೆ.
ಮಧ್ಯಮ ಕ್ರಮಾಂಕ:
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಉಪನಾಯಕ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್’ಗೆ ಬರಲಿದ್ದಾರೆ. ಭಾರತೀಯ ತಂಡದ ಮ್ಯಾನೇಜ್’ಮೆಂಟ್ ತಿಲಕ್ ವರ್ಮಾ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ 4ನೇ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಅವಕಾಶ ನೀಡಲಿದೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 5ನೇ ಕ್ರಮಾಂಕದಲ್ಲಿ ಅವಕಾಶ ಪಡೆಯಲಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ XI ನಿಂದ ಕೈಬಿಡಬಹುದು. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಮತ್ತು ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೇವಲ 12 ಮತ್ತು 7 ರನ್ ಗಳಿಸಿ ಔಟಾಗಿದ್ದರು. ಸಂಜು ಸ್ಯಾಮ್ಸನ್ ತಮ್ಮ ಕೊನೆಯ 5 ಟಿ20 ಅಂತರಾಷ್ಟ್ರೀಯ ಇನ್ನಿಂಗ್ಸ್’ಗಳಲ್ಲಿ 30, 15, 5, 12 ಮತ್ತು 7 ರನ್ ಗಳಿಸಿದ್ದಾರೆ.
ಆಲ್’ರೌಂಡರ್’ಗಳು:
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. 7ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದಲ್ಲಿ ಅಕ್ಷರ್ ಪಟೇಲ್‌ಗೆ ಅವಕಾಶ ನೀಡಲಾಗುವುದು. ಅಕ್ಷರ್ ಪಟೇಲ್ ಸ್ಪಿನ್ ಬೌಲಿಂಗ್‌ನೊಂದಿಗೆ ಟೀಂ ಇಂಡಿಯಾವನ್ನು ಬ್ಯಾಟಿಂಗ್’ನಲ್ಲಿ ಬಲಪಡಿಸಲಿದ್ದಾರೆ.
ಸ್ಪಿನ್ ಬೌಲಿಂಗ್ ವಿಭಾಗ:
ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಯುಜ್ವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆಯಾಗಲಿದ್ದಾರೆ. ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಚೈನಾಮನ್ ಸ್ಪಿನ್ನರ್ ಕುಲದೀಪ್ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಬಹುದು ಎಂಬ ನಿರೀಕ್ಷೆ ಇದೆ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ರವಿ ಬಿಷ್ಣೋಯ್ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಡಲಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಿ ರವಿ ಬಿಷ್ಣೋಯ್ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.
ವೇಗದ ಬೌಲಿಂಗ್ ವಿಭಾಗ:
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ವೇಗದ ಬೌಲರ್ ಗಳಲ್ಲಿ ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಗೆ ಅವಕಾಶ ನೀಡಿದರೆ, ಉಮ್ರಾನ್ ಮಲಿಕ್ ಮತ್ತು ಅವೇಶ್ ಖಾನ್ ಹೊರಗುಳಿಯಬೇಕಾಗುತ್ತದೆ.
ಮೂರನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿದೆ:
ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್.