Upendra Controversy : ನಟ ಉಪೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿವಾದ ಭುಗಿಲೇಳುತ್ತಿದ್ದಂತೆ ಉಪೇಂದ್ರ ಲೈವ್ ವಿಡಿಯೋ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ್ದರು.

Police Notice To Upendra : ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗ ವಿವಾದಾತ್ಮಕ ಹೇಳಿಕೆ ನೀಡಿದ ನಟ ಉಪೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ ಪ್ರಜಾಕೀಯ ಅಭಿಮಾನಿಗಳು ಮತ್ತು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ನಟ, ʻಊರಿದ್ದಲ್ಲಿ ಹೊಲಗೇರಿ ಇರುತ್ತೆʼ ಎಂದಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ದಲಿತ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದೆ. ವಿವಾದ ಭುಗಿಲೇಳುತ್ತಿದ್ದಂತೆ ಉಪೇಂದ್ರ ಲೈವ್ ವಿಡಿಯೋ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ್ದರು. ಆದರೂ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿತ್ತು.
ಇದೀಗ ವಿಚಾರ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದ್ದು, ರಾಮನಗರದಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರ ಮನೆಗೆ ಪೊಲೀಸ್ ನೋಟಿಸ್ ಬಂದಿದ್ದು, ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.
ಉಪೇಂದ್ರ ಮನೆಗೆ ಪೊಲೀಸ್ ನೋಟಿಸ್ ಬಂದಿದೆ ಎಂದು ಹೇಳಲಾಗಿದೆ. ವಾಟ್ಸಾಪ್ ಮೂಲಕ ನೋಟಿಸ್ ಕಳಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ವಿಡಿಯೋ ಮಾಡಿದ ಜಾಗದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ ಎನ್ನಲಾಗಿದೆ.
Source : https://zeenews.india.com/kannada/entertainment/police-notice-to-actor-upendra-house-152149