Asia Cup 2023 Super 4 Schedule: ಸೂಪರ್-4 ಪಂದ್ಯಗಳು ಸೆಪ್ಟೆಂಬರ್ 6 ರಿಂದ ಅಂದರೆ ಇಂದಿನಿಂದಲೇ ಪ್ರಾರಂಭವಾಗಲಿವೆ.
Asia Cup 2023 Super 4 Schedule: ಏಷ್ಯಾ ಕಪ್ ಸೂಪರ್-4 ನ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಏಷ್ಯಾಕಪ್ 2023 ರ ಸೂಪರ್ 4 ರಲ್ಲಿ ಸ್ಥಾನ ಪಡೆದಿವೆ. ಸೂಪರ್-4 ಪಂದ್ಯಗಳು ಸೆಪ್ಟೆಂಬರ್ 6 ರಿಂದ ಅಂದರೆ ಇಂದಿನಿಂದಲೇ ಪ್ರಾರಂಭವಾಗಲಿವೆ. ಸೂಪರ್-4 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗಲಿವೆ.

ಏಷ್ಯಾ ಕಪ್ 2023 ರಲ್ಲಿ, 6 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎರಡೂ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್-4ಗೆ ಅರ್ಹತೆ ಪಡೆದಿವೆ. ಗ್ರೂಪ್-ಎಯಿಂದ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್-4 ಗೆ ಅರ್ಹತೆ ಪಡೆದಿದ್ದರೆ, ಬಿ ಗುಂಪಿನಿಂದ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಸೂಪರ್-4 ತಲುಪಿವೆ.

ಸೂಪರ್-4 ಪಂದ್ಯಗಳು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಸೆಪ್ಟೆಂಬರ್ 6 ರಿಂದ ಸೆಪ್ಟೆಂಬರ್ 15 ರವರೆಗೆ ನಡೆಯಲಿವೆ. ಸೆಪ್ಟೆಂಬರ್ 6 ರಂದು ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದೊಂದಿಗೆ ಸೂಪರ್-4 ಆರಂಭವಾಗಲಿದೆ. ಭಾರತ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಮಾತ್ರ ಆಡಲಿದೆ. ಸೂಪರ್-4 ರಲ್ಲಿ ಟೀಂ ಭಾರತ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾವನ್ನು ಎದುರಿಸಲಿದೆ.
ಏಷ್ಯಾಕಪ್ ಸೂಪರ್-4 ನಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ಕೊಲಂಬೊದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿರಲಿದೆ. ಇದಕ್ಕೂ ಮುನ್ನ ನಡೆದ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.
ಏಷ್ಯಾ ಕಪ್ ಸೂಪರ್-4 ನಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಆಡಲಿದೆ. ಈ ಪಂದ್ಯ ಸೆಪ್ಟೆಂಬರ್ 12 ರಂದು ಕೊಲಂಬೊದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ರಿಂದ ನಡೆಯಲಿದೆ. ಸೂಪರ್-4 ರಲ್ಲಿ ಭಾರತ ತಂಡದ ಕೊನೆಯ ಪಂದ್ಯ ಬಾಂಗ್ಲಾದೇಶ ವಿರುದ್ಧ ಸೆಪ್ಟೆಂಬರ್ 15 ರಂದು ನಡೆಯಲಿದೆ. ಈ ಪಂದ್ಯ ಕೂಡಾ ಕೊಲಂಬೊದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಏಷ್ಯಾ ಕಪ್ 2023 ಗಾಗಿ ಭಾರತ ತಂಡ – ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್. ಸಿರಾಜ್, ಪ್ರಸಿದ್ಧ ಕೃಷ್ಣ.
ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk
ನಮ್ಮ Facebook page: https://www.facebook.com/samagrasudii