Cricket in Olympics: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಲಾಸ್ ಏಂಜಲೀಸ್ 2028 ಒಲಿಂಪಿಕ್ಸ್’ನ ಸಂಘಟಕರು ಆಟಗಳಲ್ಲಿ ಕ್ರಿಕೆಟ್ ಅನ್ನು ಸೇರಿಸಲು ಶಿಫಾರಸು ಮಾಡುವುದರ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Cricket in Olympics: 2028ರಲ್ಲಿ ಲಾಸ್ ಏಂಜಲೀಸ್’ನಲ್ಲಿ ನಡೆಯಲಿರುವ ಒಲಿಂಪಿಕ್ಸ್’ನಲ್ಲಿ ಕ್ರಿಕೆಟ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಇದರ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಲಾಸ್ ಏಂಜಲೀಸ್ 2028 ಒಲಿಂಪಿಕ್ಸ್’ನ ಸಂಘಟಕರು ಆಟಗಳಲ್ಲಿ ಕ್ರಿಕೆಟ್ ಅನ್ನು ಸೇರಿಸಲು ಶಿಫಾರಸು ಮಾಡುವುದರ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಹೇಳಿಕೆ ನೀಡಿರುವಂತೆ ‘ಒಲಿಂಪಿಕ್ಸ್’ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು LA28 ಶಿಫಾರಸು ಮಾಡಿರುವುದು ನಮಗೆ ಸಂತಸ ತಂದಿದೆ. ಇದು ಅಂತಿಮ ನಿರ್ಧಾರವಲ್ಲವಾದರೂ, ಒಂದು ಶತಮಾನಕ್ಕೂ ಹೆಚ್ಚು ಸಮಯದ ನಂತರ ಮೊದಲ ಬಾರಿಗೆ ಒಲಿಂಪಿಕ್ಸ್’ನಲ್ಲಿ ಕ್ರಿಕೆಟ್ ನೋಡುವುದು ಖುಷಿಯ ಸಂಗತಿ. ಒಂದು ವೇಳೆ ಕ್ರಿಕೆಟ್ ಸೇರ್ಪಡೆ ಖಚಿತವಾದಲ್ಲಿ, ಅದು 128 ವರ್ಷಗಳ ನಂತರ ಪುನರಾಗಮನವಾಗಲಿದೆ. ಇದಕ್ಕೂ ಮೊದಲು 1900ರಲ್ಲಿ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಲಾಗಿತ್ತು.
“ಕಳೆದ ಎರಡು ವರ್ಷಗಳಲ್ಲಿ ಹೊಸ ಕ್ರೀಡಾ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಅವರ ಬೆಂಬಲಕ್ಕಾಗಿ ನಾನು LA28 ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್’ನಲ್ಲಿ ಮುಂದಿನ ವಾರ ಭಾರತದಲ್ಲಿ ನಡೆಯುವ ಐಒಸಿ ಅಧಿವೇಶನದಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ನಾವು ಎದುರು ನೋಡುತ್ತಿದ್ದೇವೆ” ಎಂದಿದ್ದಾರೆ.
ಬ್ರಿಟನ್ನಿನ ‘ದಿ ಗಾರ್ಡಿಯನ್’ ಪತ್ರಿಕೆಯ ವರದಿಯಲ್ಲಿ ಈ ಬಗ್ಗೆ ಹೇಳಲಾಗಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್’ನಲ್ಲಿ ಪುರುಷರ ಮತ್ತು ಮಹಿಳೆಯರ T-20 ಮಾದರಿಯಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಭಾನುವಾರದಿಂದ ಮುಂಬೈನಲ್ಲಿ ಆರಂಭವಾಗಲಿರುವ ಐಒಸಿಯ 141ನೇ ಅಧಿವೇಶನದಲ್ಲಿ ಕ್ರಿಕೆಟ್ ಸೇರ್ಪಡೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡಲಾಗುವುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1