Rajyotsava Award 2023 Winners List: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ವಿಜೇತರ ವಿವರ

ರಾಜ್ಯೋತ್ಸವ ಪ್ರಶಸ್ತಿ 2023 ವಿಜೇತರ ಪಟ್ಟಿ: 2023ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳೂ ಸೇರಿದಂತೆ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಗೆ ಭಾಜನರಾದವರ ವಿವರ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್ 31: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು (Rajyotsava Award 2023 Winners List) ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. 10 ಸಂಘ ಸಂಸ್ಥೆಗಳೂ ಸೇರಿದಂತೆ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಈ ಬಾರಿ ಜಾನಪದ ಕ್ಷೇತ್ರದಲ್ಲಿ 9 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜಾನಪದ ಕ್ಷೇತ್ರದಲ್ಲಿ ಹುಸೇನಾಬಿ ಬುಡೆನ್​ ಸಾಬ್​ ಸಿದ್ಧಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, ಶಕುಂತಲಾ ದೇವಲಾನಾಯಕ, ಚೌಡಮ್ಮ, ಹೆಚ್​.ಕೆ.ಕಾರಮಂಚಪ್ಪ, ವಿಭೂತಿ ಗುಂಡಪ್ಪಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನದ ಮೆಡಲ್ ಒಳಗೊಂಡಿರಲಿದೆ.

ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪಾ ನಾಯಕ್, ನಿಜಗುಣಾನಂದ ಸ್ವಾಮೀಜಿ, ಜಿ.ನಾಗರಾಜು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಡಳಿತ ಕ್ಷೇತ್ರದಲ್ಲಿ ಜಿ.ವಿ.ಬಲರಾಮ್​ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಜಿ.ರಾಮಚಂದ್ರ, ಡಾ. ಪ್ರಶಾಂತ್ ಶೆಟ್ಟಿ ಅವರಿಗೆ, ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ. ನಾಗಣ್ಣ, ಹೆಚ್​.ಕೆ. ಸುಬ್ಬಯ್ಯ, ಸತೀಶ್ ಕುಲಕರ್ಣಿ, ಲಕ್ಷ್ಮೀಪತಿ ಕೋಲಾರ, ಪರಪ್ಪ ಗುರುಪಾದಪ್ಪ ಸಿದ್ದಾಪುರ, ಡಾ. ಕೆ.ಷರೀಫಾಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಮೂವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ರಾಮಪ್ಪ ಹವಳೆ, ಕೆ. ಚಂದ್ರಶೇಖರ್, ಕೆ.ಟಿ. ಚಂದ್ರು ಪ್ರಶಸ್ತಿ ವಿಜೇತರಾಗಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಟಿ.ಎಸ್​. ದಿವ್ಯಾ, ಅದಿತಿ ಅಶೋಕ್, ಅಶೋಕ್ ಗದಿಗೆಪ್ಪ ಏಣಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಕ್ಷೇತ್ರವಾರು ಪಟ್ಟಿಯನ್ನು ಇಲ್ಲಿ ನೀಡಲಾಗಿದೆ;

ಚಲನಚಿತ್ರ ಕ್ಷೇತ್ರದಲ್ಲಿ ಇವರಿಗೆಲ್ಲ ರಾಜ್ಯೊತ್ಸವ ಪ್ರಶಸ್ತಿ

  • ಡಿಂಗ್ರಿ ನಾಗರಾಜ್
  • ಬಿ. ಜನಾರ್ಧನ್ (ಬ್ಯಾಂಕ್ ಜನಾರ್ಧನ್)

ರಂಗಭೂಮಿ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ

  • ಎ.ಜಿ. ಚಿದಂಬರ ರಾವ್ ಜಂಬೆ
  • ಪಿ. ಗಂಗಾಧರ ಸ್ವಾಮಿ
  • ಹೆಚ್.ಬಿ.ಸರೋಜಮ್ಮ
  • ತಯ್ಯಬಖಾನ್ ಎಂ.ಇನಾಮದಾರ
  • ಡಾ.ವಿಶ್ವನಾಥ್ ವಂಶಾಕೃತ ಮಠ
  • ಪಿ.ತಿಪ್ಪೇಸ್ವಾಮಿ

ಸಂಗೀತ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ

  • ಡಾ.ನಯನ ಎಸ್.ಮೋರೆ
  • ಲೀಲಾ ಎಂ ಕೊಡ್ಲಿ
  • ಶಬ್ಬೀರ್ ಅಹಮದ್
  • ಡಾ.ಎಸ್ ಬಾಳೇಶ ಭಜಂತ್ರಿ

ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರ

  • ಟಿ.ಶಿವಶಂಕರ್
  • ಕಾಳಪ್ಪ ವಿಶ್ವಕರ್ಮ
  • ಮಾರ್ಥಾ ಜಾಕಿಮೋವಿಚ್
  • ಪಿ.ಗೌರಯ್ಯ

ಯಕ್ಷಗಾನ & ಬಯಲಾಟ ಕ್ಷೇತ್ರ

  • ಅರ್ಗೋಡು ಮೋಹನದಾಸ ಶೆಣೈ
  • ಕೆ. ಲೀಲಾವತಿ ಬೈಪಾಡಿತ್ತಾಯ
  • ಕೇಶಪ್ಪ ಶಿಳ್ಳಿಕ್ಯಾತರ
  • ದಳವಾಯಿ ಸಿದ್ದಪ್ಪ

ಜಾನಪದ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ

  • ಹುಸೇನಾಬಿ ಬುಡೆನ್ ಸಾಬ್ ಸಿದ್ದಿ
  • ಶಿವಂಗಿ ಶಣ್ಮರಿ
  • ಮಹದೇವು
  • ನರಸಪ್ಪಾ
  • ಶಕುಂತಲಾ ದೇವಲಾಯಕ
  • ಎಚ್‌.ಕೆ ಕಾರಮಂಚಪ್ಪ
  • ಶಂಭು ಬಳಿಗಾರ
  • ವಿಭೂತಿ ಗುಂಡಪ್ಪ
  • ಚೌಡಮ್ಮ

ಸಮಾಜಸೇವೆ ಕ್ಷೇತ್ರ, ರಾಜ್ಯೊತ್ಸವ ಪ್ರಶಸ್ತಿ

  • ಹುಚ್ಚಮ್ಮ ಬಸಪ್ಪ ಚೌದ್ರಿ
  • ಚಾರ್ಮಾಡಿ ಹಸನಬ್ಬ
  • ಕೆ.ರೂಪ್ಲಾ ನಾಯಕ್
  • ಪೂಜ್ಯ ನಿಜಗುಣಾನಂದ ಮಹಾಸ್ವಾಮಿ ನಿಷ್ಕಲ ಮಂಟಪ
  • ನಾಗರಾಜು.ಜಿ

ಆಡಳಿತ ಕ್ಷೇತ್ರ

  • ಬಲರಾಮ್, ತುಮಕೂರು

ವೈದ್ಯಕೀಯ ಕ್ಷೇತ್ರ

  • ಡಾ.ಸಿ. ರಾಮಚಂದ್ರ, ಬೆಂಗಳೂರು
  • ಡಾ.ಪ್ರಶಾಂತ್, ದ.ಕನ್ನಡ

ಸಾಹಿತ್ಯ ಕ್ಷೇತ್ರ

  • ಪ‌್ರೊ. ಸಿ.ನಾಗಣ್ಣ, ಚಾಮರಾಜನಗರ
  • ಸುಬ್ಬು ಹೊಲೆಯಾರ್, ಹಾಸನ
  • ಸತೀಶ್ ಕುಲಕರ್ಣಿ, ಹಾವೇರಿ

ಶಿಕ್ಷಣ ಕ್ಷೇತ್ರ

ರಾಮಪ್ಪ, ರಾಯಚೂರು ಕೆ.ಚಂದ್ರಶೇಖರ್, ಕೋಲಾರ ಕೆ.ಟಿ. ಚಂದ್ರು, ಮಂಡ್ಯ

Source : https://tv9kannada.com/karnataka/rajyotsava-award-2023-winners-complete-list-of-kannada-rajyotsava-prashasthi-winners-gsp-706061.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *