ಚಳಿಗಾಲದಲ್ಲಿ ಹಸಿ ಬಟಾಣಿ ಸೇವಿಸಿದರೆ ಈ ಆರೋಗ್ಯ ಸಮಸ್ಯೆ ಕಾಡುವುದೇ ಇಲ್ಲ.

Benefits of Eating Green Peas In Winter: ಚಳಿಗಾಲದಲ್ಲಿ ತಾಜಾ ಹಸಿರು ಬಟಾಣಿಗಳನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಸಿಗುವ  ಪ್ರಯೋಜನಗಳೇನು ಎನ್ನುವ ಮಾಹಿತಿ ಇಲ್ಲಿದೆ.   

Benefits of Eating Green Peas In Winter : ಚಳಿಗಾಲದಲ್ಲಿ ಹಸಿ ಬಟಾಣಿ ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆ ಪ್ರವೇಶಿಸುತ್ತದೆ. ಆದರೆ ವರ್ಷವಿಡೀ ಫ್ರೋಜನ್ ಮತ್ತು ಒಣ ರೂಪದಲ್ಲಿ ಬಟಾಣಿ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಆದರೆ ಫ್ರೋಜನ್ ಬಟಾಣಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದ್ದರಿಂದ ತಾಜಾ ಹಸಿರು ಬಟಾಣಿಗಳನ್ನು ಮಾತ್ರ ತಿನ್ನುವಂತೆ ಸಲಹೆ ನೀಡಲಾಗುತ್ತದೆ. ಚಳಿಗಾಲದಲ್ಲಿ ತಾಜಾ ಹಸಿರು ಬಟಾಣಿಗಳನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು  ಎನ್ನುವ ಮಾಹಿತಿ ಇಲ್ಲಿದೆ. 

ಹಸಿರು ಬಟಾಣಿ ತಿನ್ನುವ ಅದ್ಭುತ ಪ್ರಯೋಜನಗಳು : 
1. ಪ್ರೋಟೀನ್‌ನ ಸಮೃದ್ಧ ಮೂಲ :

ಹಸಿರು ಬಟಾಣಿಯಲ್ಲಿ ಪ್ರೋಟೀನ್ ಹೇರಳವಾಗಿರುತ್ತದೆ. ಹಸಿ ಬಟಾಣಿಯನ್ನು  ನಿಯಮಿತವಾಗಿ ಸೇವಿಸಿದರೆ ಮೂಳೆಗಳು ಮತ್ತು ಸ್ನಾಯುಗಳು ಬಲಗೊಳ್ಳುತ್ತವೆ. ಇದಲ್ಲದೆ, ಇದು ಮಕ್ಕಳ ದೇಹದ ಬೆಳವಣಿಗೆಗೆ ತುಂಬಾ ಸಹಕಾರಿಯಾಗಿದೆ. 

2. ಫೈಬರ್‌ನಲ್ಲಿ ಸಮೃದ್ಧವಾಗಿದೆ:
ಹಸಿರು ಬಟಾಣಿಗಳನ್ನು ಫೈಬರ್‌ನ  ಸಮೃದ್ದ ಮೂಲವಾಗಿದೆ. ಇದನ್ನು ತಿನ್ನುವುದರಿಂದ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದು ಅತಿಯಾಗಿ ತಿನ್ನುವುದನ್ನು ತಪ್ಪಿಸುತ್ತದೆ. ಈ ಮೂಲಕ ಕ್ರಮೇಣ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಪರಿಪೂರ್ಣ ಆಹಾರವಾಗಿದೆ.

3. ಮಧುಮೇಹದಲ್ಲಿ ಪರಿಣಾಮಕಾರಿ :

ಹಸಿರು ಬಟಾಣಿಗಳು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ.  ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ,  ರಕ್ತದಲ್ಲಿನ ಸಕ್ಕರೆ ಮಟ್ಟ ಏರುವುದನ್ನು ತಡೆಯುತ್ತದೆ.   ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೈಬರ್ ಇದ್ದು ಕಾರ್ಬೋಹೈಡ್ರೇಟ್‌ಗಳ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಹಸಿರು ಬಟಾಣಿ ಅತ್ಯುತ್ತಮ ಆಹಾರವಾಗಿದೆ. 

4. ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:
ಹಸಿರು ಬಟಾಣಿಯಲ್ಲಿ ಅನೇಕ ಖನಿಜಗಳು ಕಂಡುಬರುತ್ತವೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಉದಾಹರಣೆಗೆ ಹಸಿರು ಬಟಾಣಿಯಲ್ಲಿ  ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಕಂಡು ಬರುತ್ತದೆ. ಈ ಎಲ್ಲಾ ಪೋಷಕಾಂಶಗಳು ರಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡಲು ಸಹಾಯ ಮಾಡುತ್ತದೆ. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ರಕ್ತನಾಳಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

(ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)

Source : https://zeenews.india.com/kannada/health/green-peas-in-winter-may-cure-these-health-problems-168281

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *