ಸಿಲಿಂಡರ್ ಮೇಲಿನ ಸಬ್ಸಿಡಿಯಲ್ಲಿ ಹೆಚ್ಚಳ ! 600 ರೂಪಾಯಿಗಿಂತಲೂ ಕಡಿಮೆಯಾಗುವುದು ಗ್ಯಾಸ್ ದರ

LPG Subsidy News:ಪ್ರಧಾನ ಮಂತ್ರಿ ಉಜ್ವಲ ಯೋಜನೆಯ  ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್‌ಗಳ ಮೇಲಿನ ಸಬ್ಸಿಡಿಯಲ್ಲಿ ಹೆಚ್ಚಳವನ್ನು ಸರ್ಕಾರ ಘೋಷಿಸುವ ನಿರೀಕ್ಷೆಯಿದೆ. ಸಬ್ಸಿಡಿ ಮೊತ್ತ ಹೆಚ್ಚಿಸುವುದರಿಂದ ಕೋಟಿಗಟ್ಟಲೆ ಗ್ಯಾಸ್ ಗ್ರಾಹಕರಿಗೆ ಪರಿಹಾರ ಸಿಗಲಿದೆ.

  • ಮಾರ್ಚ್-ಏಪ್ರಿಲ್‌ನಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆ
  • ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಕ್ರಮ
  • 603 ರೂಪಾಯಿಗಿಂತ ಕಡಿಮೆಯಾಗಲಿದೆ ಗ್ಯಾಸ್ ಸಿಲಿಂಡರ್

LPG Subsidy News : ಮುಂದಿನ ವರ್ಷ ಮಾರ್ಚ್-ಏಪ್ರಿಲ್‌ನಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರವು ಎಲ್‌ಪಿಜಿ ಗ್ರಾಹಕರಿಗೆ ಹೆಚ್ಚಿನ ಪರಿಹಾರ ನೀಡುವ ಎಲ್ಲಾ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಗ್ಯಾಸ್ ಸಿಲಿಂಡರ್‌ಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (PMUY) ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್‌ಗಳ ಮೇಲಿನ ಸಬ್ಸಿಡಿಯಲ್ಲಿ ಹೆಚ್ಚಳವನ್ನು ಸರ್ಕಾರ ಘೋಷಿಸುವ ನಿರೀಕ್ಷೆಯಿದೆ. ಸಬ್ಸಿಡಿ ಮೊತ್ತ ಹೆಚ್ಚಿಸುವುದರಿಂದ ಕೋಟಿಗಟ್ಟಲೆ ಗ್ಯಾಸ್ ಗ್ರಾಹಕರಿಗೆ ಪರಿಹಾರ ಸಿಗಲಿದೆ.

ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಕ್ರಮ : 
 ಉಜ್ವಲ ಯೋಜನೆಯ ಪ್ರಯೋಜನವನ್ನು ಸಾಧ್ಯವಾದಷ್ಟು ಕುಟುಂಬಗಳಿಗೆ ವಿಸ್ತರಿಸಲು ಗ್ರಾಹಕರ ನೆಲೆಯನ್ನು ಹೆಚ್ಚಿಸುವತ್ತಲೂ ಸರ್ಕಾರ ಗಮನಹರಿಸುತ್ತಿದೆ. ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ. ಸೆಪ್ಟೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ದರ ಶೇ.5.02ಕ್ಕೆ ಕುಸಿದಿದೆ. ಹಣದುಬ್ಬರ ದರವನ್ನು ಶೇಕಡಾ 4 ರಿಂದ 6 ರ ವ್ಯಾಪ್ತಿಯಲ್ಲಿ ಇರಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಹಿಂದೆ ಜುಲೈನಲ್ಲಿ ಹಣದುಬ್ಬರ ದರ 15 ತಿಂಗಳ ದಾಖಲೆಯ ಮಟ್ಟ ತಲುಪಿತ್ತು.

ಎಲ್‌ಪಿಜಿ ಸಿಲಿಂಡರ್‌ನ ಬೆಲೆ 903 ರೂ. : 
ಪ್ರಸ್ತುತ, ಉಜ್ವಲ ಯೋಜನೆಯ ಫಲಾನುಭವಿಗಳು ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳ ಮೇಲೆ ಪ್ರತಿ ಸಿಲಿಂಡರ್‌ಗೆ 300 ರೂ. ಸಬ್ಸಿಡಿ ಪಡೆಯುತ್ತಾರೆ.  ಮೂಲಕ ಸಬ್ಸಿಡಿ ಪಡೆದ ನಂತರ ಫಲಾನುಭವಿಗಳಿಗೆ ಈ ಸಿಲಿಂಡರ್ 603 ರೂ. ಗೆ ಲಭಿಸುತ್ತದೆ. ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವು ಸುಮಾರು 9.6 ಕೋಟಿ ಕಡಿಮೆ ಆದಾಯದ ಕುಟುಂಬಗಳಿಗೆ ಗ್ಯಾಸ್ ಸಬ್ಸಿಡಿಯನ್ನು ಹೆಚ್ಚಿಸಿತ್ತು. ಕಡಿಮೆ ಆದಾಯದ ಕುಟುಂಬಗಳಿಗೆ ಎಲ್‌ಪಿಜಿ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ 200 ರೂ.ನಿಂದ 300 ರೂ.ಗೆ ಹೆಚ್ಚಿಸಿ ಆದೇಶ ಹೊರಡಿಸಿತ್ತು.  ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. 

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪರಿಹಾರ ನೀಡಲು ಸರ್ಕಾರ ಮತ್ತೊಮ್ಮೆ ಪ್ರಯತ್ನಿಸುತ್ತಿದೆ. ಉಜ್ವಲ ಯೋಜನೆಯಡಿಯಲ್ಲಿ ಸುಮಾರು 75 ಲಕ್ಷ ಮಹಿಳೆಯರಿಗೆ ಗ್ಯಾಸ್ ಸಂಪರ್ಕ ಕಲ್ಪಿಸಲು ಸರ್ಕಾರ ಅನುಮೋದನೆ ನೀಡಿದೆ. ಇದಾದ ನಂತರ ಫಲಾನುಭವಿಗಳ ಸಂಖ್ಯೆ 10 ಕೋಟಿ ದಾಟಲಿದೆ. 

Source: https://zeenews.india.com/kannada/business/increase-in-subsidy-huge-decrease-in-gas-cylinder-price-169365

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *