Madhuri Dixit : ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ 2024 ರ ಲೋಕಸಭೆ ಚುನಾವಣೆಯಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಮಾಧುರಿ ವಾಯುವ್ಯ ಮುಂಬೈನಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿವೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

Actress Madhuri mp election : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಾಲಿವುಡ್ ಖ್ಯಾತ ನಟಿ ಮಾಧುರಿ ದೀಕ್ಷಿತ್ ರಾಜಕೀಯ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ. ಮೂಲಗಳ ಪ್ರಕಾರ, ಮಾಧುರಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಈ ಪಕ್ಷದಿಂದಲೇ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಹೌದು.. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ಮಾಧುರಿ ದೀಕ್ಷಿತ್ ಮೈದಾನದಲ್ಲಿದ್ದರು. ಇದೇ ವೇಳೆ ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಕಾಣಿಸಿಕೊಂಡರು. ಅವರೊಂದಿಗೆ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಕೂಡ ಇದ್ದರು. ಅಷ್ಟೇ ಅಲ್ಲ, ಬಿಜೆಪಿ ಮುಖಂಡ ಆಶಿಶ್ ಶೇಲಾರ್ ಕೂಡ ಅಲ್ಲಿದ್ದರು. ಇದಾದ ನಂತರ ಮಾಧುರಿ ದೀಕ್ಷಿತ್ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿ ಬಂದವು.
ಆದರೆ, ಬಿಜೆಪಿಯ ಹಿರಿಯ ನಾಯಕ ಗೋಪಾಲ್ ಶೆಟ್ಟಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಗೋಪಾಲ್ ಶೆಟ್ಟಿ 2019 ರ ಚುನಾವಣೆಯಲ್ಲಿ ಊರ್ಮಿಳಾ ಮಾತೋಂಡ್ಕರ್ ಅವರನ್ನು ಸೋಲಿಸಿ ಎರಡನೇ ಬಾರಿಗೆ ಸಂಸದರಾದರು. ಇದಕ್ಕೂ ಮುನ್ನ ಗೋಪಾಲ್ ಶೆಟ್ಟಿ 2014ರಲ್ಲಿ ಸಂಜಯ್ ನಿರುಪಮ್ ಅವರನ್ನು ಸೋಲಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಗೋಪಾಲ್ ಶೆಟ್ಟಿ ಬದಲಿಗೆ ಮಾಧುರಿ ದೀಕ್ಷಿತ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸುವ ಅಪಾಯವನ್ನು ಬಿಜೆಪಿ ತೆಗೆದುಕೊಳ್ಳುವುದಿಲ್ಲ.
ಮಾಧುರಿ ಈ ಕ್ಷೇತ್ರದಿಂದ ಸ್ಪರ್ಧಿಸಬಹುದು : ಮಾಧುರಿ ವಾಯವ್ಯ ಮುಂಬೈ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಆದರೆ, ಈ ಸ್ಥಾನ ಶಿವಸೇನೆ ಪಾಲಾಗಿದ್ದು, ಶಿಂಧೆ ಗುಂಪಿಗೆ ಸೇರಿದ ಗಜಾನನ ಕೀರ್ತಿಕರ್ ಇಲ್ಲಿಂದ ಸಂಸದರಾಗಿದ್ದಾರೆ. ಆದರೆ, ಈ ಬಾರಿಯೂ ಅವರ ಸ್ಥಿತಿ ಚೆನ್ನಾಗಿಲ್ಲ.
ಇದೇ ಮಾಧುರಿಗೆ ವರದಾನವಾಗಲಿದೆ ಎನ್ನಲಾಗಿದೆ. ಒಪ್ಪಂದದ ಪ್ರಕಾರ, ಬಿಜೆಪಿ ಈ ಕ್ಷೇತ್ರದಲ್ಲಿ ಮಾಧುರಿ ದೀಕ್ಷಿತ್ ಅವರನ್ನು ಕಣಕ್ಕಿಳಿಸಬಹುದು. ಈ ಬಾರಿಯೂ ಕಾಂಗ್ರೆಸ್‌ನಿಂದ ಸಂಜಯ್ ನಿರುಪಮ್ ಎಂಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಸಧ್ಯ ಕಾಂಗ್ರೆಸ್ ನಾಯಕ, ಸಂಸದ ಕೀರ್ತಿಕರ್ ವಿರುದ್ಧ ತಿರುಗಿಬಿಳುವ ಸಂಭವವಿದೆ. ಇಬ್ಬರ ಜಗಳದಲ್ಲಿ ಮೂರನೇ ವ್ಯಕ್ತಿಗೆ ಲಾಭ ಎಂಬಂತೆ ಮಾಧುರಿ ಗೆಲುವಿನ ನಗೆ ಬೀರುವ ಸಾಧ್ಯತೆ ಇದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1