Bomb Threat in Bengaluru Schools: ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ
ಶಾಲೆಯಿಂದ ಮನೆಗೆ ವಾಪಸ್ ಆಗುತ್ತಿರುವ ಮಕ್ಕಳು, ಪೋಷಕರಲ್ಲಿ ಹೆಚ್ಚಾಯ್ತು ಆತಂಕ.
15ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಬಾಂಬ್ ಬೆದರಿಕೆ ಕರೆ ಬಂದಿದೆ. 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಬಸವೇಶ್ವರ ನಗರದ ನ್ಯಾಪಲ್, ಕಾರ್ಮೆಲ್, ವಿದ್ಯಾಶಿಲ್ಪ, ಮಹದೇವಪುರದ ಗೋಪಾಲನ್ ಇಂಟರ್‍ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವಾರು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲೆಯ ಸಿಬ್ಬಂದಿಗಳಲ್ಲಿ ಭಾರೀ ಆತಂಕ ವ್ಯಕ್ತವಾಗಿದೆ. ಕಳೆದ ವರ್ಷ ಬೆಂಗಳೂರಿನ 30ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದೀಗ ಅದೇ ರೀತಿಯ ಘಟನೆ ಮರುಕಳಿಸಿದೆ.
ಈ ಬಗ್ಗೆ ಮಾತನಾಡಿರುವ ರಾಜಾಜಿನಗರ ಶಾಸಕ ಸುರೇಶ್ ಕುಮಾರ್, ‘ವಿದ್ಯಾಶಿಲ್ಪ ಶಾಲೆಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಉಳಿದಂತೆ ಎಲ್ಲಾ ಶಾಲೆಗೂ ಬೆದರಿಕೆ ಮೇಲೆ ಫಾರ್ವರ್ಡ್ ಆಗಿದೆ. ಯಾರು ಗಾಬರಿ ಬೀಳುವ ಅಗತ್ಯವಿಲ್ಲ. ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ’ ಎಂದು ಹೇಳಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1