ಡಿ.23ರಂದು ನಿಗದಿಯಾಗಿದ್ದ ಪಿಎಸ್​ಐ ನೇಮಕಾತಿ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ.

PSI recruitment: ಡಿ.23ರಂದು ನಿಗದಿಯಾಗಿದ್ದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಅಂದರೆ 2024ರ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಗೃಹ ಸಚಿವ ಡಾ.ಪರಮೇಶ್ವರ್​​ ಮರು ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ.

ಬೆಂಗಳೂರು, ಡಿಸೆಂಬರ್​​​ 04: ಡಿ.23ರಂದು ನಿಗದಿಯಾಗಿದ್ದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಅಂದರೆ 2024ರ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಗೃಹ ಸಚಿವ ಡಾ.ಪರಮೇಶ್ವರ್​​ ಮರು ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ. PSI ಮರು ಪರೀಕ್ಷೆ ಮುಂದೂಡುವಂತೆ ಆಡಳಿತ, ವಿಪಕ್ಷ ಸದಸ್ಯರು ಆಗ್ರಹಿಸಿದ್ದರು. ಹಾಗಾಗಿ ಜ.23ರಂದು ಎಲ್ಲಾ 54,233 ಅಭ್ಯರ್ಥಿಗಳು ಬೆಂಗಳೂರಲ್ಲೇ ಪಿಎಸ್​ಐ ಮರು ಪರೀಕ್ಷೆ ಬರೆಸಲು ನಿರ್ಧಾರ ಮಾಡಲಾಗಿದೆ.

ಎಮ್‌ಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಬಸನಗೌಡ ತುರವಿಹಾಳ ಅವರು ಮರುಪರೀಕ್ಷೆ ಮುಂದೂಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯಗೆ ಇತ್ತೀಚೆಗೆ ಪತ್ರ ಬರೆದಿದ್ದರು.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನದ ವೇಳೆ PSI ಪರೀಕ್ಷಾರ್ಥಿಗಳು ಪ್ರತಿಭಟನೆ ಮಾಡಿದ್ದರು. ಪರೀಕ್ಷೆಗೆ ಕೇವಲ 30 ದಿನಗಳ ಕಾಲಾವಕಾಶ ನೀಡಿದ್ದಾರೆ. ಕನಿಷ್ಠ 2 ತಿಂಗಳು ಕಾಲಾವಕಾಶ ನೀಡಬೇಕೆಂದು ಪರೀಕ್ಷಾರ್ಥಿಗಳು ಆಗ್ರಹಿಸಿದ್ದರು.

ಪಿಎಸ್​ಐ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ

ಬೆಳಗಾವಿ ಚಳಿಗಾಲ ಅಧಿವೇಶನ ಮೊದಲ ದಿನದ ಶೂನ್ಯವೇಳೆಯಲ್ಲಿ ಪಿಎಸ್ಐ ಹಗರಣದ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪಿಸಿದ್ದಾರೆ. ಮರು ಪರೀಕ್ಷೆಯನ್ನು ಕನಿಷ್ಠ ‌ಮೂರು ತಿಂಗಳು ಅಥವಾ ಆರು ತಿಂಗಳು ಮುಂದೂಡುವಂತೆ ಮನವಿ ಮಾಡಿದ್ದರು. ಜೊತೆಗೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ 2021ರ ಅಕ್ಟೋಬರ್ 3ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ವೇಳೆ ಅಕ್ರಮ ಕಂಡುಬಂದಿತ್ತು. ಈ ಕಾರಣಕ್ಕೆ ಪರೀಕ್ಷೆ ರದ್ದಾಗಿತ್ತು. ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳು, ಅವರ ಕೆಲವು ಪಾಲಕರನ್ನು ಸಹ ಬಂಧಿಸಲಾಗಿದೆ.

Source: https://tv9kannada.com/karnataka/bengaluru/psi-recruitment-re-examination-scheduled-on-december-23-has-been-postponed-to-january-23-ggs-732431.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *