India vs Sri Lanka, 1st T20 Live Score: ಟೀಮ್ ಇಂಡಿಯಾದ 3ನೇ ವಿಕೆಟ್ ಪತನ

India vs Sri Lanka, 1st T20 Live Score

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ದುಕೊಂಡಿದ್ದಾರೆ.ವಿಶೇಷ ಎಂದರೆ ಉಭಯ ತಂಡಗಳಿಗೂ ಇದು ಈ ವರ್ಷದ ಮೊದಲ ಪಂದ್ಯವಾಗಿದ್ದು, ಹೀಗಾಗಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ.

ಇನ್ನು ಉಭಯ ತಂಡಗಳ ಅಂಕಿ ಅಂಶಗಳನ್ನು ಗಮನಿಸಿದರೆ, ಭಾರತ ತಂಡವೇ ಬಲಿಷ್ಠವಾಗಿದೆ. ಏಕೆಂದರೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಎರಡೂ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 17 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 8 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ. ಇದಾಗ್ಯೂ ಕೊನೆಯ ಪಂದ್ಯದಲ್ಲಿ ಭಾರತ ತಂಡವನ್ನು ಶ್ರೀಲಂಕಾ ಸೋಲಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

ಏಷ್ಯಾಕಪ್ 2022 ರಲ್ಲಿ ಸೂಪರ್​-4 ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವ ಮೂಲಕ ಶ್ರೀಲಂಕಾ ಗೆಲುವಿನ ಕೇಕೆ ಹಾಕಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವದಲ್ಲಿ ಟೀಮ್ ಇಂಡಿಯಾ ಇದ್ದರೆ, ಅತ್ತ ಭಾರತದ ವಿರುದ್ಧ ಕೊನೆಯ ಬಾರಿ ಗೆದ್ದ ಆತ್ಮವಿಶ್ವಾಸದಲ್ಲೇ ಲಂಕಾ ಕಣಕ್ಕಿಳಿಯಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಶ್ರೀಲಂಕಾ ಟಿ20 ತಂಡ: ಕುಸಾಲ್ ಮೆಂಡಿಸ್, ದಸುನ್ ಶನಕ (ನಾಯಕ) , ಪಾತುಂ ನಿಸ್ಸಂಕ , ಧನಂಜಯ ಡಿ ಸಿಲ್ವ , ಚರಿತ್ ಅಸಲಂಕ , ಭಾನುಕ ರಾಜಪಕ್ಸೆ , ವನಿಂದು ಹಸರಂಗ , ಚಾಮಿಕ ಕರುಣಾರತ್ನೆ , ಮಹೀಶ್ ತೀಕ್ಷಣ , ದಿಲ್ಶನ್ ಮಧುಶಂಕ , ಅಶ್ಮೋದ್ ಕುಮಾರ , ಅವಿಶ್ಕ ಕುಮಾರ , ಅವಿಶ್ಕ ಕುಮಾರ ವೆಲ್ಲಲಾಗೆ , ನುವಾನ್ ತುಷಾರ , ಕಸುನ್ ರಜಿತ , ಸದೀರ ಸಮರವಿಕ್ರಮ.

ಟೀಮ್ ಇಂಡಿಯಾ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

 

source https://tv9kannada.com/sports/cricket-news/india-vs-sri-lanka-1st-t20-live-score-ind-vs-sl-cricket-match-scorecard-ball-by-ball-commentary-updates-from-wankhede-stadium-in-mumbai-in-kannada-zp-au50-495233.html

Leave a Reply

Your email address will not be published. Required fields are marked *