ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿ, ವಿಜಯಪುರ & ಯಾದಗರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಫೈನಾನ್ಸ್ & ಅಡ್ಮಿನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿ.ಕಾಂ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿ, ವಿಜಯಪುರ & ಯಾದಗಿರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಡಿಸೆಂಬರ್ 15ರೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 29/11/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಡಿಸೆಂಬರ್ 15, 2023
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1