ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಪ್ಲೋಮಾ, ಪದವೀಧರರಿಗೆ ಜನವರಿಯಲ್ಲಿ ‘ಯುವನಿಧಿ’ ಜಾರಿಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಲಾಗುತ್ತಿದೆ.4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. 2024 ರ ಜನವರಿಯಲ್ಲಿ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.
ಯುವ ನಿಧಿ ನಿರುದ್ಯೋಗ ಭತ್ಯೆ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು!
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
ಬ್ಯಾಂಕ ಖಾತೆಯ ವಿವರ
ಇ-ಮೇಲ್ ಐಡಿ
ಮೊಬೈಲ್ ಸಂಖ್ಯೆ
ಭಾವಚಿತ್ರ
ಪದವಿ ಹಾಗೂ ಡಿಪ್ಲಮೋ ಮುಗಿಸಿದವರ ಕೊನೆಯ ವರ್ಷದ ಅಂಕಪಟ್ಟಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1