ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 4/1/2024 ಕೊನೆಯ ದಿನವಾಗಿದೆ.

ಅಧಿಸೂಚನೆ ಮಾಹಿತಿಯಂತೆ ಹೈದರಾಬಾದ್- ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 29 ಜವಾನ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ 4/1/2024ರ ರಾತ್ರಿ 11.59 ರವರೆಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು, ಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕಡೆಯ ದಿನಾಂಕ 6/1/2024.
ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಇ- ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು. ಆನ್‌ಲೈನ್ ಹೊರತುಪಡಿಸಿ ಖುದ್ದಾಗಿ/ ಅಂಚೆ ಮೂಲಕ/ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹುದ್ದೆಯ ವಿವರಗಳು; ಆಯ್ಕೆಯಾದ ಅಭ್ಯರ್ಥಿಗಳಿಗೆ 17,000-28,950 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು (ಕನ್ನಡ ಓದಲು ಮತ್ತು ಬರೆಯಲು ಬರುವುದೇ ಎಂಬ ಬಗ್ಗೆ ಪರೀಕ್ಷೆ ನಡೆಸಲಾಗುತ್ತದೆ).
ಎಸ್‌ಎಸ್‌ಎಲ್‌ಸಿ ಅಂಕಗಳು ಶ್ರೇಣಿಯಲ್ಲಿದ್ದರೆ (ಗ್ರೇಡ್) ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು ಮತ್ತು ಒಟ್ಟು ಪಡೆದ ಅಂಕಗಳನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ನಮೂದಿಸತಕ್ಕದ್ದು. ತಪ್ಪಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.
ಅಭ್ಯರ್ಥಿಗಳನ್ನು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ (ಸಂಬಂಧಿಸಿದ ಮೀಸಲಾತಿಯನ್ನು ಪರಿಗಣಿಸಿ) ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. (ಕನ್ನಡ ಓದಲು ಹಾಗೂ ಬರೆಯಲು ಬರುವುದೇ ಎಂಬ ಬಗ್ಗೆ ಪರೀಕ್ಷೆ ನಡೆಸಲಾಗುವುದು). ಪರೀಕ್ಷೆಯಲ್ಲಿ ಅನುತ್ತೀರ್ಣರಾದಲ್ಲಿ ಆಯ್ಕೆಗೆ ಅರ್ಹರಾಗುವುದಿಲ್ಲ).
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಆಗಿ ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 40 ವರ್ಷ, ಪ್ರವರ್ಗ 2ಎ/ 2ಬಿ/ 3ಎ/ 3ಬಿ 38 ವರ್ಷಗಳು. ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಸರಿಯಾದ ಮಾಹಿತಿ ಅಪ್‌ಲೋಡ್ ಮಾಡದ, ಅಪೂರ್ಣ ಮಾಹಿತಿ ಇರುವ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಎಸ್‌ಎಂಎಸ್ ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ.
Source : https://kannada.oneindia.com/jobs/apply-for-29-peon-post-at-ballari-district-court-332543.html
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1