ಯುವನಿಧಿ ಯೋಜನೆ ಜಾರಿಗೆ ದಿನಾಂಕ ಘೋಷಿಸಿದ ಸರ್ಕಾರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಕಾಲ ಕೂಡಿ ಬಂದಿದ್ದು, 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಸರ್ಕಾರ ಡಿಸೆಂಬರ್​ 21ರಂದು ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಿತ್ತು. ಆದರೆ, ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆಯನ್ನು ಮುಂದೂಡಿ ಡಿಸೆಂಬರ್​ 26ಕ್ಕೆ ನಿಗದಿಪಡಿಸಿದೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

https://twitter.com/CMofKarnataka?ref_src=twsrc%5Etfw%7Ctwcamp%5Etweetembed%7Ctwterm%5E1735254470391730571%7Ctwgr%5Ec3449f19cd7ca33e1269ee6606e6a86c0bd3fecb%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fforyou%3Fmode%3Dpwaaction%3Dclicklaunch%3Dtrue

ನಿರುದ್ಯೋಗಿ ಯುವಕರಿಗೆ ಮಾತ್ರ

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು. ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ, ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ), ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

Source: https://m.dailyhunt.in/news/india/kannada/vijayvani-epaper-vijaykan/yuvanidhi+yojane+jaarige+dinaanka+ghoshisidha+sarkaara-newsid-n567287866?listname=topicsList&topic=for%20you&index=13&topicIndex=0&mode=pwa&action=click

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *