IND vs SA: 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 55 ರನ್ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ 153 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 98 ರನ್ಗಳ ಮುನ್ನಡೆ ಕಾಯ್ದುಕೊಂಡಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 55 ರನ್ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ 153 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 98 ರನ್ಗಳ ಮುನ್ನಡೆ ಕಾಯ್ದುಕೊಂಡಿದೆ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ (Virat Kohli) ಅತ್ಯಧಿಕ 46 ರನ್ಗಳ ಇನ್ನಿಂಗ್ಸ್ ಆಡಿದರೆ, ನಾಯಕ ರೋಹಿತ್ ಶರ್ಮಾ(Rohit Sharma) 39 ಹಾಗೂ ಶುಭ್ಮನ್ ಗಿಲ್ (Shubman Gill) 36 ರನ್ಗಳ ಕೊಡುಗೆ ನೀಡಿದರು.
ಭಾರತಕ್ಕೂ ಕಳಪೆ ಆರಂಭ
ಆಫ್ರಿಕಾ ನೀಡಿದ 55 ರನ್ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಜೈಸ್ವಾಲ್ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಯಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ತಂಡದ ಇನ್ನಿಂಗ್ಸ್ಗೆ ಜೀವ ತುಂಬಿದರು. ಇಬ್ಬರು ಅರ್ಧಶತಕದ ಜೊತೆಯಾಟ ಕೂಡ ಹಂಚಿಕೊಂಡರು. ಈ ವೇಳೆ ರೋಹಿತ್ ಶರ್ಮಾ 39 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ಶುಭ್ಮನ್ ಗಿಲ್ ಕೂಡ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲದೆ 36 ರನ್ಗಳಿಗೆ ಬ್ಯಾಟ್ ಎತ್ತಿಟ್ಟರು.
11 ಎಸೆತಗಳಲ್ಲಿ 6 ವಿಕೆಟ್ ಪತನ
ಗಿಲ್ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ 2 ಎಸೆತಗಳಲ್ಲಿ ಸುಸ್ತಾಗಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಆದರೆ ಒಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದ ಕೆಎಲ್ ರಾಹುಲ್ 8 ರನ್ಗಳಿಗೆ ಪೆವಿಲಿಯನ್ ಹಾದಿ ಹಿಡಿದರೆ, ಈ ವಿಕೆಟ್ ಬಳಿಕ ಬಂದ ಯಾವ ಬ್ಯಾಟರ್ಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಕೊನೆಯ 6 ವಿಕೆಟ್ಗಳು ಕೇವಲ 11 ಎಸೆತಗಳಲ್ಲಿ ಪತನವಾದವು.
2 ಓವರ್ಗಳಲ್ಲಿ ತಲಾ 3 ವಿಕೆಟ್
ಅರ್ಧಶತಕದ ಅಂಚಿನಲ್ಲಿದ್ದ ವಿರಾಟ್ ಕೊಹ್ಲಿ ಕೂಡ 46 ರನ್ಗಳಿಗೆ ಸ್ಲಿಪ್ನಲ್ಲಿ ಕ್ಯಾಚಿತ್ತು ಔಟಾದರು. ಕೊನೆಯ 4 ಬ್ಯಾಟರ್ಗಳು ಖಾತೆ ತೆರೆಯದೆ ಔಟಾಗಿದ್ದು, ಆಫ್ರಿಕಾ ಬೌಲರ್ಗಳ ಮಾರಕ ದಾಳಿಗೆ ಕೈಗನ್ನಡಿಯಾಗಿತ್ತು. ಕೊನೆಯ ಎರಡು ಓವರ್ಗಳಲ್ಲಿ ಲುಂಗಿ ಎನ್ಗಿಡಿ ಯಾವುದೇ ರನ್ ನೀಡಿದೆ 3 ವಿಕೆಟ್ ಪಡೆದರೆ, ಕಗಿಸೋ ರಬಾಡ ಕೂಡ ಒಂದೇ ಓವರ್ನಲ್ಲಿ 3 ವಿಕೆಟ್ ಪಡೆದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1