ಸ್ವಾಮಿ ವಿವೇಕಾನಂದ ಜಯಂತಿ’ಯಂದೇ ‘ರಾಷ್ಟ್ರೀಯ ಯುವ ದಿನ’ ಆಚರಣೆ ಏಕೆ? ಇಲ್ಲಿದೆ ಉತ್ತರ..

ಸ್ವಾಮಿ ವಿವೇಕಾನಂದರ ತತ್ವಗಳು ಮತ್ತು ಅವರು ಬದುಕಿದ ಹಾದಿ, ದುಡಿದ ಆದರ್ಶಗಳು ಭಾರತೀಯರು ಯುವ ದಿನಾಚರಣೆ ಆಚರಿಸಲು ಸ್ಫೂರ್ತಿಯ ಉತ್ತಮ ಮೂಲವಾಗಿದೆ.

  • ಜ.12 ರಂದು ರಾಷ್ಟ್ರೀಯ ಯುವ ದಿನ.
  • ಸ್ವಾಮಿ ವಿವೇಕಾನಂದ ಜಯಂತಿಯಂದೇ ಯುವ ದಿನ ಆಚರಣೆ ಏಕೆ?
  • ಈ ಪ್ರಶ್ನೆಗೆ ಉತ್ತರ ಇಲ್ಲಿದೆ.

ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತದೆ. ಈ ದಿನದ ಆಚರಣೆಗೆ ಆಯಾ ಜಿಲ್ಲಾಡಳಿತಗಳು ಶಾಲೆ -ಕಾಲೇಜುಗಳಲ್ಲಿ ಸಹ ಆಚರಣೆ ಮಾಡಲು ಕರೆಯನ್ನು ನೀಡುತ್ತವೆ. ಈ ದಿನದ ಆಚರಣೆಯ ವಿಶೇಷತೆ ಎಂದರೆ ಇದೇ ದಿನಾಂಕದಂದೇ ಭಾರತದ ಆಧ್ಯಾತ್ಮಿಕ ಸರ್ವ ಶ್ರೇಷ್ಠ ಗುರು ಸ್ವಾಮಿ ವಿವೇಕಾನಂದರು ಜನಿಸಿದ್ದು. ಈ ದಿನಾಂಕದಂದು ಸ್ವಾಮಿ ವಿವೇಕಾನಂದರ ಜಯಂತಿಯ ಸ್ಮರಣಾರ್ಥವಾಗಿ ಆಚರಣೆ ಮಾಡಲಾಗುತ್ತದೆ.

ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಬದುಕಿದ ಹಾದಿ, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳಿಂದ ಅವರು ಇಂದಿಗೂ ಎಂದೆಂದಿಗೂ ಪ್ರಪಂಚದ ಆಧ್ಯಾತ್ಮಿಕ ಗುರು. ಆದರ್ಶ ವ್ಯಕ್ತಿಯೇ.

ಯುವಜನತೆಗೆ ನೀಡಿದ ಅವರ ಕರೆ ‘ಏಳಿ.. ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ವಾಕ್ಯವಾಗಿದೆ. ಹೀಗೆ ಅವರ ಇಂತಹ ಹಲವು ಕೊಡುಗೆಗಳಿಂದ ಅವರ ಸ್ಮರಣಾರ್ಥ, ಅವರ ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು ‘ರಾಷ್ಟ್ರೀಯ ಯುವ ದಿನ’ (National Youth Day) ಎಂದು ಆಚರಣೆ ಮಾಡಲಾಗುತ್ತದೆ.

ಸ್ವಾಮಿ ವಿವೇಕಾನಂದರ ಜನ್ಮದಿನದಂದೇ ‘ರಾಷ್ಟ್ರೀಯ ಯೂತ್ ಡೇ’ ಆಚರಣೆ ಏಕೆ?
ಸ್ವಾಮಿ ವಿವೇಕಾನಂದರ ಜನ್ಮ ದಿನದಂದೇ (ಜನವರಿ 12) ರಾಷ್ಟ್ರೀಯ ಯುವ ದಿನ ಆಚರಣೆ ಮಾಡಬೇಕು ಎಂದು ನಿರ್ಧಾರವನ್ನು ತೆಗೆದುಕೊಂಡಿದ್ದು ಭಾರತ ಸರ್ಕಾರ. ಈ ತೀರ್ಮಾನವನ್ನು 1984 ರಲ್ಲಿ ಅಂದಿನ ಕೇಂದ್ರ ಸರ್ಕಾರ ತೆಗೆದುಕೊಂಡಿತು. ಸ್ವಾಮಿ ವಿವೇಕಾನಂದರ ತತ್ವಗಳು ಮತ್ತು ಅವರು ಬದುಕಿದ ಹಾದಿ, ದುಡಿದ ಆದರ್ಶಗಳು ಭಾರತೀಯರು ಯುವ ದಿನಾಚರಣೆ ಆಚರಿಸಲು ಸ್ಫೂರ್ತಿಯ ಉತ್ತಮ ಮೂಲವಾಗಿದೆ ಎಂದು ಸರ್ಕಾರ ಹೇಳಿತ್ತು.

ಸ್ವಾಮಿ ವಿವೇಕಾನಂದರು ಪಶ್ಚಿಮ ರಾಷ್ಟ್ರಗಳಿಗೆ ವೇಧಾಂತದ ಹಿಂದು ತತ್ವಗಳನ್ನು ಮತ್ತು ಯೋಗವನ್ನು ಪರಿಚಯಿಸಿದ ಪ್ರಮುಖರಲ್ಲಿ ಮೊದಲ ಸಾಲಿನಲ್ಲಿ ಹಾಗೂ ಅಗ್ರಗಣ್ಯರಾಗಿ ನಿಲ್ಲುತ್ತಾರೆ. ಇವರು ಭಾರತ ಇತಿಹಾಸದಲ್ಲಿ ಮಾತ್ರವಲ್ಲದೇ ಪಾಶ್ಚಾತ್ಯ ರಾಷ್ಟ್ರಗಳ ಹಿಸ್ಟರಿಯಲ್ಲೂ ಸಹ ಜೀವಂತರಾಗಿದ್ದಾರೆ. 19 ನೇ ಶತಮಾನದಲ್ಲಿ ಪ್ರಪಂಚದ ಪ್ರಮುಖ ಧರ್ಮಗಳ ಪೈಕಿ ಹಿಂದು ಧರ್ಮವು ಒಂದು ಶ್ರೇಷ್ಠ ಧರ್ಮ ಎಂಬ ಭಾವನೆ ಮೂಡಿಸಿದವರಲ್ಲಿ ಇವರು ಪ್ರಮುಖರಾಗಿದ್ದಾರೆ.

ಸ್ವಾಮಿ ವಿವೇಕಾನಂದರು ಯುವಜನತೆಗೆ ನೀಡಿದ ಸಂದೇಶಗಳು:

‘ಏಳಿ, ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’.

‘ಜೀವನ ಎಂಬುದು ಕಠಿಣ ಸತ್ಯ, ಅದನ್ನು ಎದುರಿಸಿ. ನಿಮ್ಮ ಮಾರ್ಗದಲ್ಲಿ ಮುಂದುವರೆಯಿರಿ. ಅದು ಅಭೇದ್ಯವಾಗಿರಬಹುದು. ಆದರೆ ಆತ್ಮ ಅದಕ್ಕಿಂತ ಬಲಯುತವಾದುದು’.

‘ನಮ್ಮ ಹಾಗೂ ದೇವರ ಬಗ್ಗೆ ನಮಗಿರುವ ನಂಬಿಕೆಯೇ ಹಿರಿಮೆಗೆ ಸ್ಪೂರ್ತಿ’.

‘ಶತಮೂರ್ಖ ಕೂಡ ತನ್ನ ಹೃದಯಕ್ಕೆ ಹತ್ತಿರವಾದ ಕೆಲಸವನ್ನು ಸಾಧಿಸಬಲ್ಲ. ಆದರೆ ಕೆಲಸವನ್ನು ತನ್ನ ಅಭಿರುಚಿಗೆ ತಕ್ಕಂತೆ ರೂಪಿಸುವವನು ಮಾತ್ರ ಬುದ್ಧಿವಂತ’.

ನನಗೆ ಬೇಕಾದುದು ಕಬ್ಬಿಣದ ಸ್ನಾಯುಗಳು, ಉಕ್ಕಿನ ನರಗಳು ಮತ್ತು ಸಿಡಿಲಿನಂಥ ಮನಸ್ಸುಗಳು. ಅಂತಹ ಕೆಲವೇ ತರುಣರಿಂದ ದೇಶದ ಭವಿಷ್ಯವನ್ನೇ ಬದಲಾಯಿಸಬಲ್ಲೇ’.

‘ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ’.

‘ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ. ಆದ್ದರಿಂದ ಏನನ್ನು ಯೋಚಿಸುತ್ತೀರೋ ಅದರ ಬಗ್ಗೆ ಎಚ್ಚರದಿಂದಿರಿ’.

‘ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ’.

‘ದಿನದಲ್ಲಿ ಒಮ್ಮೆಯಾದರು ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ’.

‘ಸ್ವಾರ್ಥವೇ ಅಧರ್ಮ, ನಿಸ್ವಾರ್ಥವೇ ಧರ್ಮ. ಹೆಚ್ಚು ನಿಸ್ವಾರ್ಥಿಯಾದವನೇ ಧರ್ಮಿಷ್ಟ ಮತ್ತು ಶಿವನಿಗೆ ಹತ್ತಿರ. ನಿಜವಾಗಿಯೂ ಜೀವನ ಸೇವೆಯೇ ಶಿವನ ಸೇವೆ’.

ನಿಮ್ಮ ಮೇಲೆ ನೀವು ನಂಬಿಕೆ ಇಡಿ ಆಗ ಜಗತ್ತು ನಿಮ್ಮ ಪಾದದಡಿಯಲ್ಲಿರುತ್ತದೆ’.

‘ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ’.

‘ಒಂದು ಸಾಮಾನ್ಯ ಕೆಲಸವನ್ನು ಅತ್ಯುತ್ತಮವಾಗಿ ಮಾಡುವುದರಿಂದ ಶ್ರೇಷ್ಠ ಪ್ರತಿಫಲ ದೊರಕುತ್ತದೆ’.

‘ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ದವೇ ಗುರು’.

‘ಯಾವುದನ್ನು ಬಯಸಬೇಡಿ. ನಮ್ಮನ್ನು ದುಃಖಕ್ಕೊಳಪಡಿಸುವ ಎಲ್ಲ ಕಷ್ಟಗಳಿಗೂ ಆಸೆಯೇ ಕಾರಣ’.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *