NPS To OPS : ಹಳೇ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.

ರಾಜ್ಯದ ಸರಕಾರಿ ನೌಕರರ ‘ಒಪಿಎಸ್‌’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ.

ಬೆಂಗಳೂರು : ರಾಜ್ಯದ ಸರಕಾರಿ ನೌಕರರ ‘ಒಪಿಎಸ್‌’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ.ಹೌದು, ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ.

ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ. 2006ರ ಏಪ್ರಿಲ್​ಗೆ ಮುನ್ನ ನೇಮಕಗೊಂಡ ಸರ್ಕಾರಿ ನೌಕರರು OPS ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇದು ಎಲ್ಲಾ ಸರ್ಕಾರಿ ನೌಕರರಿಗೂ ಸಂಬಂಧಪಟ್ಟಿರುವುದಿಲ್ಲ. ಕೇವಲ ಏಪ್ರಿಲ್ 2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಎಂದು ತಿಳಿಸಿದೆ.ಕರ್ನಾಟಕ ಸರಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಅವರು ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ. 01.04.2006 ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಷರತ್ತುಗಳಿಗೆ ಒಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೆನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ.ಸರ್ಕಾರದ ಹೊಸ ಆದೇಶದಲ್ಲೇನಿದೆ ?01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು.

ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದುಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪುಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.

01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ನಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು, ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *