ರಾಜ್ಯದ ‘ಜನತೆಗೆ’ ಮತ್ತೊಂದು ‘ಗುಡ್‌ನ್ಯೂಸ್‌’: ಈ ಕಾರ್ಡ್‌ನಿಂದ ‘ದೇಶದಲ್ಲಿ’ ಎಲ್ಲೆ ಇದ್ದರೂ ಸಿಗಲಿದೆ ‘ಉಚಿತ ಚಿಕಿತ್ಸೆ’ !

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಆಯುಷ್ಮಾನ್‌ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್‌ ಒಂದಾಗಿದೆ. ಈ ಕಾರ್ಡ್‌ನಿಂದ ದೇಶದಲ್ಲಿ ಎಲ್ಲೆ ಇದ್ದರೂ ಉಚಿತ ಚಿಕಿತ್ಸೆ ಪಡೆಯಲು ಪೋರ್ಟೆಬಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭಗಳಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು.

ರೆಫರಲ್‌ ಅವಶ್ಯಕತೆ ಇರುವುದಿಲ್ಲ.

ಆರೋಗ್ಯ ಕಾರ್ಡ್‌ ಅನ್ನು ನಿಮ್ಮ ಹತ್ತಿರದ ಗ್ರಾಮ ಒನ್‌ ಕೇಂದ್ರದಲ್ಲಿ ಸೂಕ್ತ ದಾಖಲೆ ನೀಡಿ ಉಚಿತವಾಗಿ ಪಡೆದುಕೊಳ್ಳಬಹುದು. ಅಥವಾ ಸ್ವಯಂ ನೋಂದಣಿ ಮೂಲಕವೂ ಸಹ beneficiary.nha.gov.in ವೆಬ್‌ಸೈಟ್‌ನಿಂದ ಪಡೆಯಬಹುದು.

ಯೋಜನೆಯ ಪ್ರಮುಖ ಅಂಶಗಳೇನು?
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್ ಗೆ ನೂತನ ಹೆಲ್ತ್ ಕಾರ್ಡ್ ಗಳನ್ನ ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

ಕಾರ್ಡ್‌ ಪಡೆಯುವುದೇಗೆ?
ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದಾಗಿರುತ್ತದೆ. ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ ಕುಟುಂಬಗಳು 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು, Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1


Leave a Reply

Your email address will not be published. Required fields are marked *