IND vs ENG: ಮೂರನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 67/1

IND vs ENG: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಬೆನ್ ಡಕೆಟ್ 28 ರನ್ ಕಲೆಹಾಕಿ ಅಶ್ವಿನ್​ಗೆ ಬಲಿಯಾದರೆ, ಮತ್ತೊಬ್ಬ ಆರಂಭಿಕ ಝಾಕ್ ಕ್ರಾಲಿ 29 ರನ್ ಹಾಗೂ ರೆಹಾನ್ ಅಹ್ಮದ್ 8 ರನ್ ಕಲೆಹಾಕಿ 4ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇದಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಹೊಂದಿದ್ದರೂ ಕೇವಲ 255 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್​ಗೆ 399 ರನ್ ಗುರಿ ನೀಡಿತು.

ಟೀಂ ಇಂಡಿಯಾ ಪರ ಆರಂಭಿಕ ಶುಭ್​ಮನ್ ಗಿಲ್ 147 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್​ಗಳ ಇನ್ನಿಂಗ್ಸ್ ಆಡಿದರೆ, ಆಲ್​ರೌಂಡರ್ ಅಕ್ಷರ್ ಪಟೇಲ್ 45 ರನ್​ಗಳ ಕೊಡುಗೆ ನೀಡಿದರು.

ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ಗಳ ಕಾಣಿಕೆ ನೀಡಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರು. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದರೆ, ರೆಹಾನ್ ಅಹ್ಮದ್ 3 ವಿಕೆಟ್, ಅನುಭವಿ ವೇಗಿ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *