Shah Rukh Khan in Toxic movie : ಇತ್ತೀಚಿನ ವರದಿಗಳ ಪ್ರಕಾರ, ನಟ ಯಶ್ ಅವರ ಟಾಕ್ಸಿಕ್ ಸಿನಿಮಾದ ಅತಿಥಿ ಪಾತ್ರಕ್ಕಾಗಿ ಶಾರುಖ್ ಖಾನ್ ಅವರನ್ನು ಸಂಪರ್ಕಿಸಲಾಗಿದೆ.
- ನಟ ಯಶ್ ಅವರ ಟಾಕ್ಸಿಕ್ ಸಿನಿಮಾ
- ಟಾಕ್ಸಿಕ್ ಸಿನಿಮಾದಲ್ಲಿ ಶಾರುಖ್ ಖಾನ್!
- ಸ್ಯಾಂಡಲ್ವುಡ್ಗೆ ಶಾರುಖ್ ಖಾನ್ ಎಂಟ್ರಿ?

Shah Rukh Khan in Toxic movie : ರಾಕಿಂಗ್ ಸ್ಟಾರ್ ಯಶ್ ಅವರ ನಿಜವಾದ ಹೆಸರು ನವೀನ್ ಕುಮಾರ್ ಗೌಡ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಿತ್ರಗಳ ಬ್ಲಾಕ್ಬಸ್ಟರ್ ಯಶಸ್ಸಿನ ನಂತರ ಪ್ಯಾನ್-ಇಂಡಿಯಾ ಖ್ಯಾತಿಯನ್ನು ಯಶ್ ಗಳಿಸಿದರು. 2022 ರಲ್ಲಿ ರಿಲೀಸ್ ಆದ ಕೆಜಿಎಫ್ 2 ಸಿನಿಮಾ 1000 ಕೋಟಿ ಗಳಿಸಿತು. ಆ ಬಳಿಕ ಯಶ್ ಸಾಕಷ್ಟು ಸಮಯ ತೆಗೆದುಕೊಂಡು ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಗೀತು ಮೋಹನ್ದಾಸ್ ಅವರು ನಿರ್ದೇಶಿಸುತ್ತಿರುವ ಟಾಕ್ಸಿಕ್ ಸಿನಿಮಾ ಕನ್ನಡದಲ್ಲಿ ತಯಾರಾಗಲಿದೆ. ಇದು ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಿಗೆ ಡಬ್ಬಿಂಗ್ ಆಗಲಿದೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ಟಾಕ್ಸಿಕ್ ಸಿನಿಮಾ ಬಿಡುಗಡೆ ಆಗಲಿದೆ. 2025 ಏಪ್ರಿಲ್ 10 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಇದೀಗ ಈ ಸಿನಿಮಾ ಬಗ್ಗೆ ಮತ್ತೊಂದು ಬಿಗ್ ಅಪ್ಡೇಟ್ ಹೊರಬಿದ್ದಿದೆ. ಟಾಕ್ಸಿಕ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಬಾಲಿವುಡ್ ಕಿಂಗ್ ಖಾನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಶಾರುಖ್ ಖಾನ್ ಅವರನ್ನು ಇತ್ತೀಚೆಗೆ ಟಾಕ್ಸಿಕ್ ಚಿತ್ರ ತಂಡ ಸಂಪರ್ಕಿಸಿತ್ತು ಎಂದು ಹೇಳಲಾಗಿದೆ.
ಶಾರುಖ್ ಖಾನ್ ಸದ್ಯ ಅವರ ವೃತ್ತಿಜೀವನದ ಉತ್ತುಂಗದಲ್ಲಿದ್ದಾರೆ. ಪ್ರತಿಯೊಬ್ಬ ನಿರ್ದೇಶಕರು ಈ ಸಮಯದಲ್ಲಿ ಅವರೊಂದಿಗೆ ಕೆಲಸ ಮಾಡಲು ಬಯಸುತ್ತಿದ್ದಾರೆ. ವರ್ಷದ ಆರಂಭದಲ್ಲಿ, ಯಶ್, ಗೀತು ಮೋಹನ್ದಾಸ್ ಮತ್ತು ಟಾಕ್ಸಿಕ್ ತಯಾರಕರು ಶಾರುಖ್ ಅವರನ್ನು ಸಂಪರ್ಕಿಸಿದರು. ಟಾಕ್ಸಿಕ್ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕಾಗಿ ಶಾರುಖ್ ಅವರೊಂದಿಗೆ ಮಾತನಾಡಿದ್ದರು ಎಂದು ಮೂವೊಂದು ತಿಳಿಸಿದೆ ಎಂದು ವರದಿಯಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1