ಬೆಂಗಳೂರು : 2023-24ನೇ ಸಾಲಿನಲ್ಲಿ ಮಾನ್ಯತೆ ನವೀಕರಣ ಆಗದೇ ಇರುವ ಖಾಸಗಿ ಪ್ರೌಢ ಶಾಲೆಗಳ ಎಸ್ ಎಸ್ ಎಲ್ ಸಿ ಪರೀಕ್ಷೆ -1ರ ಕರಡು ಪ್ರವೇಶ ಪತ್ರಗಳನ್ನು ತಡೆ ಹಿಡಿದಿರುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು : 2023-24ನೇ ಸಾಲಿನಲ್ಲಿ ಮಾನ್ಯತೆ ನವೀಕರಣ ಆಗದೇ ಇರುವ ಖಾಸಗಿ ಪ್ರೌಢ ಶಾಲೆಗಳ ಎಸ್ ಎಸ್ ಎಲ್ ಸಿ ಪರೀಕ್ಷೆ -1ರ ಕರಡು ಪ್ರವೇಶ ಪತ್ರಗಳನ್ನು ತಡೆ ಹಿಡಿದಿರುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮಾರ್ಚ್ \ಏಪ್ರಿಲ್ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಕ್ಕೆ ಮಕ್ಕಳ ನೊಂದಣಿ ಮಾಡಿಕೊಂಡಿರುವ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳು ಮಾನ್ಯತೆ ನವೀಕರಣ ಆಗಿರುದೆಯೇ / ಇಲ್ಲವೇ ಎಂಬುದರ ಬಗ್ಗೆ ಮಂಡಲಿಗೆ ಮಾಹಿತಿ ನೀಡಲು ಉಲ್ಲೇಖ-1ರಲ್ಲಿ ತಿಳಿಸಲಾಗಿರುತ್ತದೆ.
ಅದ್ದರಂತೆ ಉಲ್ಲೇಖ-2ರಂತೆ ಶಾಲೆಗಳ ಮಾನ್ಯತೆ ನವೀಕರಣದ ಬಗ್ಗೆ ಮಾಹಿತಿಯನ್ನು ಜಿಲ್ಲಾ ಉಪನಿರ್ದೇಶಕರು (ಆಡಳಿತ) / ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಂಡಲಿಗೆ ಸಲ್ಲಿಕೆಯಾಗಿರುತ್ತದೆ. ಸದರಿ ಪಟ್ಟಿಯನ್ನು ಪರಿಶೀಲಿಸಲಾಗಿ ರಾಜ್ಯದ ಒಟ್ಟು 129 ಶಾಲೆಗಳು [ಪಟ್ಟಿ ಲಗತ್ತಿಸಿದೆ] ಮಾನ್ಯತೆ ನವೀಕರಣ ಆಗದೇ ಇರುವುದು ಕಂಡು ಬಂದಿರುತ್ತದೆ. ಸದರಿ ಶಾಲೆಗಳ ಕರಡು ಪ್ರವೇಶ ಪತ್ರಗಳನ್ನು ತಡೆಹಿಡಿಯಲಾಗಿರುತ್ತದೆ.
ಒಂದು ವೇಳೆ 129 ಶಾಲೆಗಳಲ್ಲಿ ಯಾವುದಾದರೂ ಶಾಲೆಯು ಮುಂದಿನ ದಿನಗಳಲ್ಲಿ ಮಾನ್ಯತೆ ನವೀಕರಣ ಹೊಂದಿದಲ್ಲಿ (ಆ ಶಾಲೆಯ ಮಕ್ಕಳು ಈಗಾಗಲೇ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿರಬೇಕು) ಅದರ ಮಾಹಿತಿಯನ್ನು ಮಂಡಲಿಯಿಂದ ಅಂತಿಮ ಪ್ರವೇಶ ಪತ್ರಗಳನ್ನು ವಿತರಿಸುವುದಕ್ಕೆ 15 ದಿನಗಳ ಮುಂಚಿತವಾಗಿ ನಿಮ್ಮ ಮುಖಾಂತರ ಸಲ್ಲಿಕೆಯಾದಲ್ಲಿ ಆ ಶಾಲೆಗಳ ಕರಡು ಪ್ರವೇಶ ಪತ್ರಗಳನ್ನು ಪರಿಶೀಲನೆಗೆ ಬಿಡುಗಡೆ ಮಾಡಲಾಗುವುದು. ಈ ಮಾಹಿತಿಯನ್ನು ಸಂಬಂಧಿಸಿದ ಶಾಲೆಗಳಿಗೆ ತಿಳಿಸಲು ಸೂಚಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1