ರಾಜ್ಯದ SC-STʼ ವರ್ಗದ ಪದವೀಧರರಿಗೆ ಭರ್ಜರಿ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಹಾಯಧನ.

ಬೆಂಗಳೂರು: ಪತ್ರಿಕೋದ್ಯಮದಲ್ಲಿ (Journalism) ಪರಿಶಿಷ್ಟ ಜಾತಿ/ವರ್ಗದ ಸ್ನಾತಕೋತ್ತರ ಪದವೀಧರರಿಗೆ ಎಲೆಕ್ಟ್ರಾನಿಕ್ ಹಾಗೂ Digital ಮಾದ್ಯಮದಲ್ಲಿ ಸ್ಥಾಪಿಸಲು ಸಹಾಯಧನ ನೀಡುವ ಕುರಿತು. ಉದ್ದಿಮೆಯನ್ನು ಸ್ಥಾಪಿಸಲು ಸಹಾಯಧನ ನೀಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ: 19-10-2023 ರಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ -ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ / ತಾಲ್ಲೂಕು ಮಟ್ಟದಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ ರೂ. 5.00 ಲಕ್ಷಗಳ ಸಹಾಯಧನವನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿತ್ತು.

ಮೇಲೆ ಓದಲಾದ ಕ್ರಮಾಂಕ (2) -ರಲ್ಲಿ ದಿನಾಂಕ: 19-10-2023 ರ ಆದೇಶದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಮನವಿಯನ್ನು ಪರಿಶೀಲಿಸಿದ ಸರ್ಕಾರವು ದಿನಾಂಕ: 19-10-2023 ರ ಆದೇಶದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಲು ತೀರ್ಮಾನಿಸಿ, ಸರ್ಕಾರವು ಈ ಕೆಳಗಿನಂತೆ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ ರೂ. 5.00 ಲಕ್ಷಗಳ ಸಹಾಯಧನವನ್ನು ನಿಗದಿಪಡಿಸಿ ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಕಇ 352 ಎಸ್‌ಡಿಸಿ 2022. ದಿನಾಂಕ:19-10-2023 ರಲ್ಲಿ ನಿಗಧಿಪಡಿಸಲಾದ ಷರತ್ತುಗಳನ್ನು ಮಾರ್ಪಡಿಸಿ, ಈ ಕಳಕಂಡಂತೆ ಪರಿಷ,ರಿಸಿ. ಆದೇಶಿಸಲಾಗಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *