India Test Squad: ಭಾರತ ಟೆಸ್ಟ್ ತಂಡ ಪ್ರಕಟ: ವಿರಾಟ್ ಕೊಹ್ಲಿ ಅಲಭ್ಯ.

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಆದರೆ ಈ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿಲ್ಲ.

India vs England Test: ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾವನ್ನು (Team India) ಘೋಷಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಾಣಿಸಿಕೊಂಡಿಲ್ಲ. ವೈಯುಕ್ತಿಕ ಕಾರಣಗಳಿಂದ ಕೊಹ್ಲಿ ಸಂಪೂರ್ಣ ಸರಣಿಯಿಂದ ಹೊರಗುಳಿಯಲು ಬಯಸಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಇನ್ನು ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಕಾರಣ ಅಯ್ಯರ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ತಿಳಿದು ಬಂದಿದೆ.

ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಸರ್ಫರಾಝ್ ಖಾನ್ ತಂಡದಲ್ಲೇ ಉಳಿದಿದ್ದಾರೆ. ಅಂದರೆ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಅವರ ಬದಲಿ ಆಟಗಾರನಾಗಿ ಸರ್ಫರಾಝ್ ಆಯ್ಕೆಯಾಗಿದ್ದರು. ಇದೀಗ ಕೊನೆಯ ಮೂರು ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಲ್ಲೂ ಯುವ ಬ್ಯಾಟರ್​ಗೆ ಅವಕಾಶ ನೀಡಲಾಗಿದೆ.

ರಾಹುಲ್-ರವಿ ಅನುಮಾನ?

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಸದ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಾಗ್ಯೂ ಇಬ್ಬರನ್ನು ಮುಂಬರುವ ಪಂದ್ಯಗಳಿಗೆ ಆಯ್ಕೆ ಮಾಡಲಾಗಿದೆ. ಆದರೆ ಫಿಟ್​ನೆಸ್ ಕ್ಲಿಯರೆನ್ಸ್ ಪಡೆದರೆ ಮಾತ್ರ ಜಡೇಜಾ ಮತ್ತು ರಾಹುಲ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಈ ಇಬ್ಬರು ಸ್ಟಾರ್ ಆಟಗಾರರು 3ನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ವಿಕೆಟ್ ಕೀಪರ್ ಯಾರು?

ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೂ ವಿಕೆಟ್ ಕೀಪರ್​ಗಳಾಗಿ ಕೆಎಸ್ ಭರತ್ ಹಾಗೂ ಧ್ರುವ್ ಜುರೇಲ್ ಅವರನ್ನು ಮುಂದುವರೆಸಲಾಗಿದೆ. ಮೊದಲೆರಡು ಪಂದ್ಯಗಳಲ್ಲಿ ವೈಫಲ್ಯ ಹೊಂದಿರುವ ಭರತ್ ಅವರನ್ನು ಮತ್ತೆ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಅತ್ತ ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಬೆಂಚ್ ಕಾದಿದ್ದ ಜುರೇಲ್ ಅವರನ್ನು 2ನೇ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಆಕಾಶ್ ದೀಪ್ ಎಂಟ್ರಿ:

ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಹೆಚ್ಚುವರಿ ವೇಗದ ಬೌಲರ್ ಆಗಿ ಆಯ್ಕೆಯಾಗಿದ್ದ ಅವೇಶ್ ಖಾನ್ ಅವರನ್ನು ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಆಕಾಶ್ ದೀಪ್​ಗೆ ಸ್ಥಾನ ಕಲ್ಪಿಸಲಾಗಿದೆ. ಇನ್ನುಳಿದಂತೆ 2ನೇ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬದಲಿಗೆ ಆಯ್ಕೆಯಾದ ವಾಷಿಂಗ್ಟನ್ ಸುಂದರ್ ಕೊನೆಯ 3 ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಟೆಸ್ಟ್​ ತಂಡ:  ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

IND vs ENG ಕೊನೆಯ ಮೂರು ಪಂದ್ಯಗಳ ವೇಳಾಪಟ್ಟಿ:

  • ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  • ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  • ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Views: 0

Leave a Reply

Your email address will not be published. Required fields are marked *